ಹಗಲಿನಲ್ಲಿ ಪಟಾಕಿ ಸಿಡಿಸಿದರೆ ಬೀಳುತ್ತೆ ಕೇಸ್: ಈ ಬಾರಿ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ!

Picture of Savistara

Savistara

Bureau Report

​​ಬೆಂಗಳೂರು: ರಾಜ್ಯದಲ್ಲಿ ದೀಪಾವಳಿ ಸಂದರ್ಭದಲ್ಲಿ ಹಗಲಿನಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ.
​

ಈ ಕುರಿತು ಸೂಚನೆ ನೀಡಿರುವ ಅರಣ್ಯ ಮತ್ತು ಪರಿಸರ ಇಲಾಖೆ ಸಚಿವರು, ದೀಪಾವಳಿ ಸಂದರ್ಭದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು (Green Crackers) ಮಾತ್ರ ಬಳಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
​

ಇಲಾಖೆಯ ಪ್ರಮುಖ ಸೂಚನೆಗಳು:

​ಕ್ರಿಮಿನಲ್ ಪ್ರಕರಣ: ನಿಷೇಧಿತ ಪಟಾಕಿಗಳನ್ನು ಸಂಗ್ರಹ ಮಾಡುವುದು ಅಥವಾ ಮಾರಾಟ ಮಾಡುವುದು ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು.
​ಜಾಗೃತಿ ಹಾಗೂ ತ್ಯಾಜ್ಯ ವಿಲೇವಾರಿ: ಪರಿಸರಸ್ನೇಹಿ ದೀಪಾವಳಿ ಆಚರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಹಬ್ಬದ ವೇಳೆ ಉತ್ಪಾದನೆಯಾಗುವ ಘನತ್ಯಾಜ್ಯವನ್ನು ಸ್ಥಳೀಯ ಸಂಸ್ಥೆಗಳು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!