ಡಿ. 31ರೊಳಗೆ 2.5 ಲಕ್ಷ ಮಂದಿಗೆ ಪೌರತ್ವ: ಸಿಎಂ ಸುವೇಂದು ಅಧಿಕಾರಿ

Picture of Savistara

Savistara

Bureau Report

ಠಾಕುರನಗರ(ಪಶ್ಚಿಮ ಬಂಗಾಳ): ‘ರಾಜ್ಯದಲ್ಲಿ ಪೌರತ್ವ ತಿದ್ದುಪಡಿಕಾಯ್ದೆ (ಸಿಎಎ) ಅಡಿಯಲ್ಲಿ ಅರ್ಜಿ ಸಲ್ಲಿಸಿರುವ 2.5 ಲಕ್ಷ ಮಂದಿಗೆ ಡಿಸೆಂಬರ್ 31ರೊಳಗೆ ಪೌರತ್ವ ಪ್ರಮಾಣಪತ್ರ ನೀಡಲಾಗುವುದು’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ತಿಳಿಸಿದ್ದಾರೆ.

ಇಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಮಾತುವಾ ಗೋಸಾಯಿ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು ಮಾತುವಾ ಸಮುದಾಯದ ಬೆಂಬಲವೇ ಪ್ರಮುಖ ಕಾರಣ. ಸಮುದಾಯದ ಅಭಿವೃದ್ಧಿಗಾಗಿ ₹50 ಕೋಟಿ ಅನುದಾನ ನೀಡಲಾಗುವುದು’ ಎಂದು ಹೇಳಿದ್ದಾರೆ.’ಪಶ್ಚಿಮ ಬಂಗಾಳದಲ್ಲಿ ಇದುವರೆಗೆ ಕೇವಲ 25 ಸಾವಿರ ಮಂದಿಗೆ ಮಾತ್ರ ಸಿಎಎ ಅಡಿಯಲ್ಲಿ ಪೌರತ್ವ ದೊರೆತಿದೆ. ಅರ್ಜಿಗಳ ವಿಚಾರಣೆಯನ್ನು ತ್ವರಿತಗೊಳಿಸಿ, ಡಿಸೆಂಬರ್ 31ರೊಳಗೆ 2.5 ಲಕ್ಷ ಅರ್ಜಿದಾರರಿಗೆ ಪೌರತ್ವ ನೀಡುತ್ತೇವೆ’ ಎಂದು ತಿಳಿಸಿದ್ದಾರೆ.’ಇತರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಸಿಎಎ ಜಾರಿಗೊಳಿಸಿದ್ದಾರೆ. ಅರ್ಹರಿಗೆ ಪೌರತ್ವವೂ ದೊರೆತಿದೆ. ಆದರೆ ಮಮತಾ ಬ್ಯಾನರ್ಜಿ ಮಾತ್ರ ಅದನ್ನು ವಿರೋಧಿಸಿದ್ದರು’ ಎಂದು ಅವರು ಆರೋಪಿಸಿದ್ದಾರೆ.

ಸಿಎಎ ಅಡಿಯಲ್ಲಿ ಪೌರತ್ವ ಪಡೆಯುವ ಅರ್ಹ ಪರಿಶಿಷ್ಟ ಜಾತಿ ಸಮುದಾಯದವರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರಗಳನ್ನೂ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸುವೇಂದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾತುವಾ ಸಮುದಾಯಕ್ಕಾಗಿ ಏನೂ ಮಾಡಿಲ್ಲ. ಬದಲಿಗೆ ಸಮುದಾಯವನ್ನು ವಿಭಜಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.’ಸಿಎಎ ಕಾಯ್ದೆಯು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳಿಂದ ಬಂದ ಧಾರ್ಮಿಕ ಕಿರುಕುಳಕ್ಕೆ ಒಳಗಾದ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವ ಪಡೆಯಲು ಅವಕಾಶ ಕಲ್ಪಿಸುತ್ತದೆ. ಮಾತುವಾ ಸಮುದಾಯದ ಮೂಲ ಇಂದಿನ ಬಾಂಗ್ಲಾದೇಶದಲ್ಲಿದೆ’ ಎಂದು ಹೇಳಿದ್ದಾರೆ.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!