ಸ್ಟಿಂಗ್ ಪ್ರಕರಣ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದೆಹಲಿ ನಿವಾಸದಲ್ಲೇ ಫೋನ್ ಹಸ್ತಾಂತರ: ಪೊಲೀಸ್ ಆಯುಕ್ತರ ಮಾಹಿತಿ

Picture of Savistara

Savistara

Bureau Report

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ದೊರೆತಿದೆ.

ಪ್ರಕರಣದಲ್ಲಿ ಬಳಕೆಯಾದ ಮೊಬೈಲ್ ಫೋನ್‌ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರ ದೆಹಲಿಯ ಅಧಿಕೃತ ನಿವಾಸದಲ್ಲಿಯೇ ಹಸ್ತಾಂತರವಾಗಿವೆ ಎಂದು ಆರೋಪಿ ರಿತೇಶ್ ಪಾಂಡೆ ವಿಚಾರಣೆ ವೇಳೆ ತಿಳಿಸಿರುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಅಕ್ಟೋಬರ್ 24ರಂದು ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ರಿತೇಶ್ ಪಾಂಡೆಯನ್ನು ಬಂಧಿಸಿದ್ದರು.

ದೆಹಲಿಯ ಕರೋಲ್ ಬಾಗ್‌ನಲ್ಲಿ ಮೊಬೈಲ್ ಫೋನ್‌ ಖರೀದಿ: ಈ ಪ್ರಕರಣದಲ್ಲಿ ರಿತೇಶ್ ಪಾಂಡೆ ಮಾತ್ರವಲ್ಲದೆ ವಿನೋದ್ ಶರ್ಮಾ ಮತ್ತು ಪ್ರಜ್ವಲ್ ಪ್ರಸಾದ್ ಎಂಬ ಇಬ್ಬರು ವ್ಯಕ್ತಿಗಳು ಪ್ರಮುಖವಾಗಿ ಭಾಗಿಯಾಗಿರುವುದು ತನಿಖೆಯಲ್ಲಿ ಸ್ಪಷ್ಟವಾಗಿದೆ. ಪ್ರಜ್ವಲ್ ಪ್ರಸಾದ್ ನೀಡಿದ ಸೂಚನೆಯಂತೆ ವಿನೋದ್ ಶರ್ಮಾ ಮತ್ತು ರಿತೇಶ್ ಪಾಂಡೆ ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಅಂಗಡಿಯೊಂದಕ್ಕೆ ತೆರಳಿ ಮೊಬೈಲ್ ಫೋನ್‌ ಖರೀದಿ ಮಾಡಿದ್ದರು. ಖರೀದಿಸಿದ ಮೊಬೈಲ್ ತಂದು ದೆಹಲಿಯಲ್ಲಿರುವ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಅಧಿಕೃತ ನಿವಾಸದಲ್ಲೇ ಪ್ರಜ್ವಲ್ ಪ್ರಸಾದ್‌ಗೆ ಹಸ್ತಾಂತರಿಸಲಾಗಿತ್ತು ಎಂದು ವಿಚಾರಣೆ ವೇಳೆ ರಿತೇಶ್ ಪಾಂಡೆ ತಿಳಿಸಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಅನುಮಾನಾಸ್ಪದ ಹಣಕಾಸು ವಹಿವಾಟು: ಪ್ರಕರಣದ ಮುಂದಿನ ತನಿಖೆಗಾಗಿ ವಿನೋದ್ ಶರ್ಮಾ ಮತ್ತು ಪ್ರಜ್ವಲ್ ಪ್ರಸಾದ್‌ಗೆ ನೋಟಿಸ್ ಜಾರಿ ಮಾಡಲಾಗಿದೆ. ಆದರೆ ಅವರಿಬ್ಬರೂ ತಲೆಮರೆಸಿಕೊಂಡಿದ್ದು, ಬಂಧನದಿಂದ ಪಾರಾಗಲು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವುದು ತಿಳಿದುಬಂದಿದೆ. ರಿತೇಶ್ ಪಾಂಡೆ ಹಾಗೂ ತಲೆಮರೆಸಿಕೊಂಡಿರುವ ಪ್ರಜ್ವಲ್ ಪ್ರಸಾದ್ ನಡುವೆ ನಡೆದಿರುವ ಅನುಮಾನಾಸ್ಪದ ಹಣಕಾಸು ವಹಿವಾಟುಗಳನ್ನು ಸಹ ಪೊಲೀಸರು ಪತ್ತೆ ಹಚ್ಚಿದ್ದಾರೆ. ​ಸಾಮಾಜಿಕ ಜಾಲತಾಣಗಳಲ್ಲಿ ಕಂಟೆಂಟ್ ಕ್ರಿಯೇಟರ್ಸ್‌ಗಳಾಗಿ ಸಕ್ರಿಯರಾಗಿದ್ದ ಈ ಮೂವರು ಯಾರ ಸೂಚನೆಯ ಮೇರೆಗೆ ಈ ಕೃತ್ಯ ಎಸಗಿದ್ದಾರೆ ಮತ್ತು ಇವರ ಹಿಂದಿರುವ ಪ್ರಭಾವಿ ಕೈಗಳು ಯಾರದ್ದು ಎಂಬ ನಿಟ್ಟಿನಲ್ಲಿ ಸಮಗ್ರ ವಿಚಾರಣೆ ಮುಂದುವರೆದಿದೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!