UP | ಮತದಾರರ ಪಟ್ಟಿಯಿಂದ ಕೋಟ್ಯಂತರ ಹಿಂದೂಗಳ ಹೆಸರು ಹೊರಕ್ಕೆ: ಯೋಗಿ ಕಳವಳ

Picture of Savistara

Savistara

Bureau Report

ಲಖನೌ: ಉತ್ತರ ಪ್ರದೇಶದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವೇಳೆ ಕೋಟ್ಯಂತರ ಹಿಂದೂಗಳ ಹೆಸರುಗಳನ್ನು ಕೈಬಿಡಲಾಗಿದೆ ಎಂದಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಎಸ್‌ಐಆ‌ರ್ ಪ್ರಕ್ರಿಯೆ ಮೇಲೆ ನಿಗಾ ಇಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯಿಂದ ಪಟ್ಟಿಯಿಂದ 1.27 ಕೋಟಿ ಹಿಂದೂಗಳ ಹೆಸರುಗಳು ಕಾಣೆಯಾಗಿವೆ. ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕಾಣೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.ಈ ರೀತಿ ಹೆಸರುಗಳನ್ನು ಅಳಿಸಿಹಾಕಿರುವುದು 28 ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಲ್ಲಿ ಪಕ್ಷದ ಸ್ಥಾನಮಾನವನ್ನು ಕುಗ್ಗಿಸುತ್ತಿದೆ ಎಂದಿದ್ದಾರೆ. ಜೊತೆಗೆ, ರಾಜ್ಯದ ಜನಸಂಖ್ಯೆಯ ಅಂಕಿಅಂಶಗಳನ್ನು ಉಲ್ಲೇಖಿಸಿದ್ದಾರೆ. ಪ್ರಸ್ತುತ ಉತ್ತರ ಪ್ರದೇಶದಲ್ಲಿ 16 ಕೋಟಿಗೂ ಹೆಚ್ಚು ಮತದಾರರು ಇರಬೇಕಿತ್ತು. ಆದರೆ, ಸಂಖ್ಯೆ 13 ಕೋಟಿಯಷ್ಟೇ ಇದೆ ಎಂದು ವಾದಿಸಿದ್ದಾರೆ.ಪಂಚಾಯತ್‌ ಚುನಾವಣಾ ಪಟ್ಟಿಗಳಲ್ಲಿ ಹೆಸರುಗಳಿರುವ 66 ಲಕ್ಷ ಜನರು, ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳಲ್ಲಿ ಕಾಣೆಯಾಗಿದ್ದಾರೆ ಎಂಬುದನ್ನೂ ಅವರು ಗಮನಕ್ಕೆ ತಂದಿದ್ದಾರೆ.

ಅದೇ ರೀತಿ, ಸರ್ಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳಾದ 55 ಲಕ್ಷ ಜನರ ಹೆಸರುಗಳು ಕೂಡ ಮತದಾರರ ಪಟ್ಟಿಯಲ್ಲಿ ಇಲ್ಲದಿರುವುದು ಕಂಡುಬಂದಿದೆ. 18-19 ವಯೋಮಾನದ ಸುಮಾರು 4.5 ಲಕ್ಷ ಯುವಕರ ಹೆಸರುಗಳೂ ಪಟ್ಟಿಯಿಂದ ಬಿಟ್ಟುಹೋಗಿವೆ ಎಂದೂ ಅವರು ಬೊಟ್ಟು ಮಾಡಿದ್ದಾರೆ.ಕಳೆದ ಎಸ್‌ಐಆ‌ರ್ ಪ್ರಕ್ರಿಯೆಯ ಅವಧಿಯಲ್ಲಿ ರಾಜ್ಯದ ಮತದಾರರ ಪಟ್ಟಿಗೆ ಕೇವಲ ನಾಲ್ಕು ಲಕ್ಷ ಮತದಾರರು ಮಾತ್ರ ಸೇರ್ಪಡೆಯಾಗಿದ್ದಾರೆ ಎಂದು ಆದಿತ್ಯನಾಥ ಆತಂಕ ವ್ಯಕ್ತಪಡಿಸಿದ್ದಾರೆ.ಎಲ್ಲಾ ಅರ್ಹ ಮತದಾರರನ್ನು ಪಟ್ಟಿಯಲ್ಲಿ ಸೇರಿಸುವುದನ್ನು ಖಚಿತಪಡಿಸಿಕೊಳ್ಳಲು ಬೂತ್ ಮಟ್ಟದ ಅಧಿಕಾರಿಗಳೊಂದಿಗೆ (ಬಿಎಲ್‌ಒ) ಸಮನ್ವಯ ಸಾಧಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಯೋಗಿ ಸೂಚಿಸಿದ್ದಾರೆ.ಹಿಂದೂ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವುದನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿಯನ್ನು ಸಂಸದರು, ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳಿಗೆ ವಹಿಸಲಾಗಿದೆ.ಈ ಮಧ್ಯೆ, ಎಸ್‌ಐಆರ್ ಪ್ರಕ್ರಿಯೆಯ ನಂತರ ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ 2.04 ಕೋಟಿಗೂ ಹೆಚ್ಚು ಮತದಾರರನ್ನು ತೆಗೆದುಹಾಕಲಾಗಿದೆ. ಈ ಪೈಕಿ ಹೆಚ್ಚಿನ ಹೆಸರುಗಳನ್ನು ನಗರ ಪ್ರದೇಶಗಳಲ್ಲಿ ಅಳಿಸಿಹಾಕಲಾಗಿದೆ.

ಭಾರತೀಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಉತ್ತರ ಪ್ರದೇಶದಲ್ಲಿ 84 ಲಕ್ಷಕ್ಕೂ ಹೆಚ್ಚು ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಅಂತಿಮ ಮತದಾರರ ಸಂಖ್ಯೆ 13,39,84,792ಕ್ಕೆ ತಲುಪಿದೆ.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!