ಹಾಲಿನ ಬೆಲೆ ಏರಿಕೆ ವಿರುದ್ಧ ಬಿಜೆಪಿ ಕೊಡಗು ಜಿಲ್ಲಾ ಘಟಕದಿಂದ ಬೃಹತ್ ಪ್ರತಿಭಟನೆ!

Picture of Savistara

Savistara

Bureau Report

ಮಡಿಕೇರಿ: ಹಾಲಿನ ಬೆಲೆ ಏರಿಕೆಯ ಮೂಲಕ ಜನಸಾಮಾನ್ಯರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೇರುತ್ತಿರುವ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಿರ್ಧಾರವನ್ನು ಖಂಡಿಸಿ, ಇಂದು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕೊಡಗು ಜಿಲ್ಲಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ರೈತರ ಹಿತಾಸಕ್ತಿ ಹಾಗೂ ಗ್ರಾಹಕರ ಹಿತ ಕಾಪಾಡುವ ಉದ್ದೇಶದಿಂದ ನಡೆದ ಈ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

“ರೈತರ ಹೆಸರಿನಲ್ಲಿ ಬೆಲೆ ಏರಿಕೆ ಮಾಡುವ ಸರ್ಕಾರ, ನಿಜವಾಗಿಯೂ ಹೈನುಗಾರರ ಬದುಕಿಗೆ ಎಷ್ಟು ನೆರವಾಗುತ್ತಿದೆ?” ಎಂಬ ಪ್ರಶ್ನೆ ಇಂದು ಜನಸಾಮಾನ್ಯರ ಮನದಲ್ಲಿ ಮೂಡಿದೆ. ಹಾಲಿನ ಬೆಲೆ ಏರಿಕೆಯ ಸಂಪೂರ್ಣ ಲಾಭ ರೈತರಿಗೆ ತಲುಪುತ್ತಿದೆಯೇ? ಅಥವಾ ಗ್ರಾಹಕರ ಮೇಲೆ ಮಾತ್ರ ಹೆಚ್ಚುವರಿ ಹೊರೆ ಬೀಳುತ್ತಿದೆಯೇ? ಎಂಬುದಕ್ಕೆ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕಾಗಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ರೈತರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ, ಗ್ರಾಹಕರ ಹೊರೆ ಕಡಿಮೆ ಮಾಡುವುದು ಸರ್ಕಾರದ ಜವಾಬ್ದಾರಿ. ಈ ಅನ್ಯಾಯದ ಬೆಲೆ ಏರಿಕೆ ವಿರುದ್ಧ ಬಿಜೆಪಿ ತನ್ನ ಜನಪರ ಹೋರಾಟವನ್ನು ಮುಂದುವರಿಸಲಿದೆ.

ರೈತರ ಪರವಾಗಿ, ಜನಸಾಮಾನ್ಯರ ಪರವಾಗಿ ಬಿಜೆಪಿ ಕೊಡಗು ಜಿಲ್ಲೆಯ ಹೋರಾಟ ಸದಾ ಮುಂದುವರಿಯಲಿದೆ!

ಉಪಸ್ಥಿತಿ: ಬಿಜೆಪಿ ಜಿಲ್ಲಾ ಅಧ್ಯಕ್ಷರು, ಪೊನ್ನಂಪೇಟೆ, ವಿರಾಜಪೇಟೆ ಮಂಡಲದ ಪ್ರಮುಖರು, ಯುವ ಮೋರ್ಚಾ, ಮಹಿಳಾ ಮೋರ್ಚಾ ಕಾರ್ಯಕರ್ತರು ಹಾಜರಿದ್ದರು.ಹಾಲಿನ ಬೆಲೆ ಏರಿಕೆ ಖಂಡಿಸಿ ಕೊಡಗು ಬಿಜೆಪಿ ಪ್ರತಿಭಟನೆ

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!