ಉಡುಪಿ: ಇಂದು ಉಡುಪಿ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ KDP ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ್ ಸರ್ಜಿ ಅವರು ಭಾಗವಹಿಸಿ, ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣದ 9 ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು.

ಪಠ್ಯಪುಸ್ತಕ ವಿಳಂಬ, ಕುಡಿಯುವ ನೀರಿನಲ್ಲಿ ಕೀಟನಾಶಕ ಪರೀಕ್ಷೆ, ಅತಿಥಿ ಉಪನ್ಯಾಸಕರ ವೇತನ, ರಕ್ತಹೀನತೆ ನಿಯಂತ್ರಣ, ತೃತೀಯ ಲಿಂಗಿಗಳಿಗೆ ಗೃಹಲಕ್ಷ್ಮೀ, ಅಂಗನವಾಡಿ ಪೌಷ್ಟಿಕ ಆಹಾರ, CHC ವೈದ್ಯರ ಸೇವೆ, ESI ಆಸ್ಪತ್ರೆ ಸಿಬ್ಬಂದಿ ಹಾಜರಾತಿ ಮತ್ತು ಅಂಗನವಾಡಿಗಳಲ್ಲಿ ಶುದ್ಧ ನೀರು ಸೇರಿದಂತೆ ಸಮಸ್ಯೆಗಳನ್ನು ಪ್ರಸ್ತಾಪಿಸಿ ಪರಿಹಾರಕ್ಕೆ ಆಗ್ರಹಿಸಿದರು.ಈ ವೇಳೆ ಶಾಸಕರಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಗುರ್ಮೆ ಸುರೇಶ ಶೆಟ್ಟಿ, ಮಂಜುನಾಥ್ ಭಂಡಾರಿ, DC ಸ್ವರೂಪ ಟಿ.ಕೆ, CEO ಪ್ರತೀಕ್ ಬಾಯಲ್ ಉಪಸ್ಥಿತರಿದ್ದರು.









































