ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

Picture of Savistara

Savistara

Bureau Report

ಪುತ್ತೂರು: ಗ್ಯಾರಂಟಿ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಆರಂಭದಿಂದಲೂ ಭ್ರಷ್ಟಾಚಾರ, ಹಗರಣಗಳಲ್ಲಿ ತೊಡಗಿದ್ದು, ಜನಪರ ಅಭಿವೃದ್ಧಿಯ ಇಚ್ಛಾಶಕ್ತಿಯೇ ಇಲ್ಲದೆ ಕೇಂದ್ರ ಸರ್ಕಾರದ ಯೋಜನೆಗಳಿಗೂ ಅಡ್ಡಗಾಲು ಹಾಕುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ನಗರ ಮಂಡಲದ ವತಿಯಿಂದ ಸೋಮವಾರ ನಗರದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಆಯೋಜಿಸಲಾದ ಜನಾಂದೋಲನ ‘ನಮ್ಮ ಹಕ್ಕು ನಮಗೆ ನೀಡಿ’ ಬೃಹತ್ ಹಕ್ಕೊತ್ತಾಯ ಸಭೆಯಲ್ಲಿ ಅವರು ಮಾತನಾಡಿದರು.

ಜನರು ಕಟ್ಟುವ ತೆರಿಗೆ ಹಣ ಜನರ ಉಪಯೋಗಕ್ಕೆ ಸಿಗದಂತಹ ಸ್ಥಿತಿಯನ್ನು ಕಾಂಗ್ರೆಸ್ ಆಡಳಿತ ಮಾಡಿದೆ. ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಾದ ರೂ. 36 ಸಾವಿರ ಕೋಟಿ ಹಣವನ್ನು ನುಂಗಿ ನೀರು ಕುಡಿದಿದೆ ಎಂದು ಕಿಡಿಕಾರಿದರು.

ಅಮೃತ ನಗರೋತ್ಥಾನದಲ್ಲಿ 25 ಕೋಟಿ ತಂದಿದ್ದೇವೆ – ಜೀವಂಧರ್ ಜೈನ್

ನಗರಸಭಾ ಮಾಜಿ ಅಧ್ಯಕ್ಷ ಕೆ. ಜೀವಂಧರ್ ಜೈನ್ ಮಾತನಾಡಿ, ಬಿಜೆಪಿ ಆಡಳಿತದಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿ ಪುತ್ತೂರು ನಗರಕ್ಕೆ ವಿಶೇಷ ಅನುದಾನ ರೂ. 25 ಕೋಟಿ ತಂದು ಪ್ರತಿ ವಾರ್ಡ್ ಗಳ ಅಭಿವೃದ್ಧಿಗೆ ಹಂಚಿಕೆ ಮಾಡಿದ್ದೇವೆ. ಕೇಂದ್ರದ 15ನೇ ಹಣಕಾಸು ಆಯೋಗದ ಅನುದಾನದಲ್ಲೂ ಅಭಿವೃದ್ಧಿ ಮಾಡಿದ್ದೇವೆ ಎಂದರು.

ಬೊಳುವಾರಿನಲ್ಲಿ ಪಾದಯಾತ್ರೆಗೆ ಚಾಲನೆ

‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆಗೆ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ಸಂತ ಪರಿವಾರದ ಹಿರಿಯ ನಾಯಕ ಯು. ಪೂವಪ್ಪ ಅವರು ಬಿಜೆಪಿ ಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.

ನೂರಾರು ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆ ನಡೆಸಿದರು. ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಪ್ರಾಸ್ತಾವಿಕವಾಗಿ ಮಾತನಾಡಿ, ದಿನಕ್ಕೆ 3 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 1 ಕಿ.ಮೀ. ಪಾದಯಾತ್ರೆ ಹಾಗೂ ಹಕ್ಕೊತ್ತಾಯ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತಾ, ವಿದ್ಯಾ ಆರ್. ಗೌರಿ, ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ರಾಜೇಶ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಳ್ಮಾರ್ ಮತ್ತಿತರರು ಉಪಸ್ಥಿತರಿದ್ದರು.

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!