ಸುಳ್ಯ :ವರುಣನ ರೌದ್ರನರ್ತನ; ರಸ್ತೆಗಳೆಲ್ಲಾ ಜಲಾವೃತಗೊಂಡು ಸಂಚಾರ ದುಸ್ತರ!

Picture of Savistara

Savistara

Bureau Report

ಮಂಗಳವಾರ ಸಂಜೆಯ ವೇಳೆಗೆ ದಿಢೀರನೆ ರಭಸದ ಮಳೆ ಸುರಿದಿದ್ದು, ಸಾರ್ವಜನಿಕ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೆಳಿಗ್ಗೆಯಿಂದಲೇ ಕ ಮೋಡಕವಿದ ವಾತಾವರಣವಿತ್ತಾದರೂ, ಸಂಜೆ ವೇಳೆಗೆ ಅಬ್ಬರಿಸಿದ ವರುಣನ ಆರ್ಭಟಕ್ಕೆ ಪಟ್ಟಣದ ಪ್ರಮುಖ ರಸ್ತೆಗಳೆಲ್ಲವೂ ಹೊಳೆಯಂತಾಗಿ ಮಾರ್ಪಟ್ಟಿದ್ದವು.​ವಿಶೇಷವಾಗಿ ಸುಳ್ಯದ ಶ್ರೀರಾಮ ಪೇಟೆ ಹಾಗೂ ಬೊಳುಬೈಲು ಪರಿಸರದಲ್ಲಿ ಮಳೆ ನೀರು ಚರಂಡಿಗಳನ್ನು ಮೀರಿ ನೇರವಾಗಿ ರಸ್ತೆಯ ಮೇಲೆಯೇ ರಭಸವಾಗಿ ಹರಿದಿದೆ.

ಹಠಾತ್ ಹರಿದು ಬಂದ ಮಳೆ ನೀರಿನ ರಭಸಕ್ಕೆ ಕೆಲವೆಡೆ ಅಂಗಡಿ ಮುಂಗಟ್ಟುಗಳೊಳಗೂ ನೀರು ನುಗ್ಗಿ ವರ್ತಕರು ಮತ್ತು ಸಾರ್ವಜನಿಕರು ತೀವ್ರ ಪರದಾಟ ನಡೆಸುವಂತಾಯಿತು. ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದರಿಂದ ಪಾದಚಾರಿಗಳು ಹಾಗೂ ವಾಹನ ಸವಾರರು ಸಾಗಲು ಹರಸಾಹಸ ಪಟ್ಟರು. ಮುರಾಸು ಚಂಡಮಾರುತದ ಪ್ರಭಾವದಿಂದಾಗಿ ಕಳೆದ ಎರಡು ದಿನಗಳಿಂದ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಅದರ ಭಾಗವಾಗಿ ಇಲ್ಲೂ ಧಾರಾಕಾರ ಮಳೆ ದಾಖಲಾಗಿದೆ.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!