ಅನಿಲ್ ಅಂಬಾನಿ ಗ್ರೂಪ್ ವಿರುದ್ಧದ ತನಿಖೆಯಲ್ಲಿ 2 ವಿಮಾನಗಳನ್ನು ಜಪ್ತಿ ಮಾಡಿದ ED

Picture of Savistara

Savistara

Bureau Report

ನವದೆಹಲಿ: ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್‌ (ಆರ್‌ಎಎಜಿ)ವಿರುದ್ಧದ ಬ್ಯಾಂಕ್‌ ವಂಚನೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ, 2 ವಿಮಾನಗಳು ಸೇರಿದಂತೆ ₹510 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ.

ಈ ತನಿಖೆಯು ರಿಲಯನ್ಸ್‌ ಹೋಮ್‌ ಫೈನಾನ್ಸ್ ಲಿಮಿಟೆಡ್ (ಆರ್‌ಎಚ್‌ಎಫ್‌ಎಲ್), ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಲಿಮಿಟೆಡ್ (ಆರ್‌ಸಿಎಫ್‌ಎಲ್)ನಲ್ಲಿ ನಡೆದ ₹263.05 ಕೋಟಿ ವಂಚನೆ ಹಾಗೂ ರಿಲಯನ್ಸ್ ಕಮ್ಯುನಿಕೇಷನ್ ಲಿಮಿಟೆಡ್ (ಆರ್‌ಸಿಒಎಮ್)ನಲ್ಲಿ ನಡೆದ ₹247.12 ಕೋಟಿ ವಂಚನೆಯ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ.₹510 ಕೋಟಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಲು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ತಾತ್ಕಾಲಿಕ ಆದೇಶವನ್ನು ಹೊರಡಿಸಲಾಗಿದೆ ಎಂದು ಇಡಿ ಹೇಳಿದೆ.ಆರ್‌ಸಿಒಎಮ್ ಪ್ರಕರಣದಲ್ಲಿ, ಜಪ್ತಿ ಮಾಡಲಾದ ಆಸ್ತಿಗಳಲ್ಲಿ 2 ಚಾರ್ಟಡ್್ರ ವಿಮಾನಗಳು, 6 ಜಮೀನುಗಳು ಮತ್ತು ಮಹಾರಾಷ್ಟ್ರದಲ್ಲಿರುವ ಒಂದು ಕಚೇರಿ ಕಟ್ಟಡ ಸೇರಿವೆ. ಆರ್‌ಎಚ್‌ಎಫ್‌ಎಲ್‌, ಆರ್‌ಸಿಎಫ್‌ಎಲ್ ಪ್ರಕರಣದಲ್ಲಿ, ತಮಿಳುನಾಡಿನಲ್ಲಿರುವ ಎರಡು ಪವನ ವಿದ್ಯುತ್ ಘಟಕಗಳು, ಬ್ಯಾಂಕ್ ಠೇವಣಿಗಳು, ಫಿಕ್ಸ್‌ ಡೆಪಾಸಿಟ್‌ಗಳು ಮತ್ತು ಹೂಡಿಕೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಪ್ರಕರಣಗಳಲ್ಲಿ ಇಡಿ ಇದುವರೆಗೆ 10 ಜನರನ್ನು ಬಂಧಿಸಿದ್ದು, 6 ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದೆ. ಇದಲ್ಲದೆ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಡಿಯಲ್ಲಿ ಪ್ರತ್ಯೇಕ ತನಿಖೆಯನ್ನು ಪ್ರಾರಂಭಿಸಿದೆ. ಇದುವರೆಗೆ ₹23,100 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮತ್ತು ವಶಪಡಿಸಿಕೊಳ್ಳಲಾಗಿದೆ.

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!