ಪ್ರದೀಪ್‌ ಪೂಜಾರಿ ಮೇಲೆ ಹಲ್ಲೆ ಪ್ರಕರಣ: ಮಧ್ಯಪ್ರದೇಶದಲ್ಲಿ ಇಬ್ಬರು ವಶಕ್ಕೆ

Picture of Savistara

Savistara

Bureau Report

ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕ‌ರ್ ಬುಧವಾರ ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿರುವ ಇಬ್ಬರನ್ನು ಪೊಲೀಸರು ಉಡುಪಿಗೆ ಕರೆತರುತ್ತಿದ್ದು ಇಲ್ಲಿಗೆ ಕರೆತಂದ ಬಳಿಕ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್‌ ಅವರ ಸಾವಿಗೆ ಪ್ರಚೋದನೆ ನೀಡಿದ ಆರೋಪದಡಿ ಪೆರ್ಡೂರಿನ ದಿಲೀಪ್ ಕುಮಾರ್ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು.ಹೊರರಾಜ್ಯದ ಇಬ್ಬರು ಕಾರ್ಮಿಕರು ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಆರೋಪಿಗಳ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!