ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಯೋಜನೆಯಡಿ ಬಾಕಿ ಉಳಿದಿದ್ದ 34, 35 ಮತ್ತು 36ನೇ ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ₹7,405.86 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ತಿಳಿಸಲಾಗಿದೆ.ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡಲಾಗುತ್ತಿದೆ. ಈಗಾಗಲೇ 33 ಕಂತುಗಳ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿದ್ದು, ಇದೀಗ ಹೆಚ್ಚುವರಿಯಾಗಿ ಮೂರು ಕಂತುಗಳ ಹಣ ಬಿಡುಗಡೆ ಮಾಡಲಾಗಿದೆ.ಈ ಹಣ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗುವುದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ಆರ್ಥಿಕವಾಗಿ ನೆರವಾಗಲಿದೆ. ಹಣ ಜಮೆಯಾದ ಬಗ್ಗೆ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ಅಥವಾ ಪಾಸ್‌ಬುಕ್ ಮೂಲಕ ಪರಿಶೀಲಿಸಿಕೊಳ್ಳಬಹುದು.
ಗೃಹಲಕ್ಷ್ಮಿ ಫಲಾನುಭವಿಗಳಿಗೆ ದೀಪಾವಳಿ ಗಿಫ್ಟ್: 3 ಕಂತುಗಳ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ!
Savistara
Bureau Report
[t4b-ticker]

































