ಪಡಿತರ ಚೀಟಿದಾರರಿಗೆ 10ರೊಳಗೆ ಇ- ಕೆವೈಸಿ ಕಡ್ಡಾಯ

Picture of Savistara

Savistara

Bureau Report

ಬೆಂಗಳೂರು: ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಇದೇ 10 ಕೊನೆಯ ದಿನ. ಹೀಗಾಗಿ, ಬಾಕಿ ಇರುವ ಪಡಿತರ ಚೀಟಿದಾರರು ಕೊನೆಯ ದಿನದ ಒಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು ಎಂದು ಆಹಾರ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮರು ಇ-ಕೆವೈಸಿ ಮಾಡಿಸಬೇಕಿದ್ದ 2,67,64,276 ಪಡಿತರ ಚೀಟಿ ಫಲಾನುಭವಿಗಳ ಪೈಕಿ, ನ. 3ರವರೆಗೆ 2,26,30,747 ಫಲಾನುಭವಿಗಳು ಇ-ಕೆವೈಸಿ ಮಾಡಿಸಿದ್ದಾರೆ. ಇನ್ನೂ 41,33,529 ಇ-ಕೆವೈಸಿ ಮಾಡಿಸಲು ಬಾಕಿ ಇದ್ದಾರೆ.ಇ-ಕೆವೈಸಿ ಮಾಡಿಸಲು ಕೊನೆಯ ದಿನವನ್ನು ಈಗಾಗಲೇ ಒಮ್ಮೆ ವಿಸ್ತರಿಸಲಾಗಿದೆ. ನ. 10ರ ನಂತರ ಯಾವುದೇ ಕಾರಣಕ್ಕೂ ಕೊನೆ ದಿನವನ್ನು ವಿಸ್ತರಿಸುವುದಿಲ್ಲ. ಬಾಕಿ ಉಳಿದಿರುವ ಎಲ್ಲ ಫಲಾನುಭವಿಗಳು ‘ಅನ್ನ ಸೇವೆ’ ಮೊಬೈಲ್ ತಂತ್ರಾಂಶದ ಮೂಲಕ ಖುದ್ದಾಗಿ ಅಥವಾ ನ್ಯಾಯಬೆಲೆ ಅಂಗಡಿಗಳಲ್ಲಿ ‘ಆಹಾ‌ರ್’ ತಂತ್ರಾಂಶದ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು.ಇಲ್ಲವಾದರೆ ನಿಯಮದ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದೂ ಇಲಾಖೆ ತಿಳಿಸಿದೆ.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!