ಹವಾಮಾನ ಆಧಾರಿತ ಬೆಳೆ ವಿಮೆಯಲ್ಲಿ ಲೋಪ: ಜಿಲ್ಲಾಧಿಕಾರಿ ಜೊತೆ ಸಂಸದ ಬಿವೈ ರಾಘವೇಂದ್ರ ಸಭೆ

Picture of Savistara

Savistara

Bureau Report


ಶಿವಮೊಗ್ಗ: 2024-25 ಹಾಗೂ 2025-26 ನೇ ಸಾಲಿನಲ್ಲಿ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಸರಿಯಾಗಿ ಅನುಷ್ಠಾನಗೊಳ್ಳದಿರುವ ಮತ್ತು ರೈತರು ಪಾವತಿಸಿದ ಪ್ರೀಮಿಯಂ ಹಣ ಮರಳದಿರುವ ಗಂಭೀರ ಸಮಸ್ಯೆ ಕುರಿತು ಇಂದು ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ಸಂಸದ ಬಿವೈ ರಾಘವೇಂದ್ರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಯಿತು.

ಪ್ರಮುಖವಾಗಿ ಮಾಜಿ ಶಾಸಕರಾದ ಶ್ರೀ ಎಚ್. ಹಾಲಪ್ಪ ಅವರು ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕುಗಳ ರೈತ ಮುಖಂಡರೊಂದಿಗೆ ಈ ಸಭೆ ನಡೆಸಿ ಚರ್ಚಿಸಲಾಯಿತು.

ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, KSNMDC ಹಾಗೂ ವಿಮಾ ಕಂಪನಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ, ಮಳೆ ಮಾಪನ ಕೇಂದ್ರಗಳು ದುರಸ್ತಿಯಲ್ಲಿರುವುದರಿಂದ ಅಕ್ಕಪಕ್ಕದ ಗ್ರಾಮ ಪಂಚಾಯಿತಿಗಳ ಅಂಕಿ-ಅಂಶ ಆಧರಿಸಿ ವಿಮೆಯನ್ನು ಅವೈಜ್ಞಾನಿಕವಾಗಿ ಜಮೆ ಮಾಡಿರುವುದು ಬೆಳಕಿಗೆ ಬಂದಿದೆ. KSNMDC ಮತ್ತು KPTCL ಮಳೆ ಮಾಹಿತಿಯ ನಡುವಿನ ವ್ಯತ್ಯಾಸದಿಂದ ರೈತರು ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಎರಡೂ ಇಲಾಖೆಗಳ ಮಳೆ ಮಾಹಿತಿಯನ್ನು ಸಂಗ್ರಹಿಸಿ, ವ್ಯತ್ಯಾಸಗಳನ್ನು ಸರಿಪಡಿಸಿ ರೈತರಿಗೆ ಆಗಿರುವ ಅನ್ಯಾಯವನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!