ನ. 6ರಂದು ಶಿವಮೊಗ್ಗದ ನವುಲೆಯಲ್ಲಿರುವ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎನ್.ಇ.ಎಸ್. ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಮ್ಯಾನೇಜ್‌ಮೆಂಟ್, ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವ ‘ಕೌಶಲ್ಯ–3.0’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಡಾ. ಧನಂಜಯ ಸರ್ಜಿ ಭಾಗವಹಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಂವಹನ ಕೌಶಲ್ಯ, ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವಂತಿರಬೇಕು.

ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವುದರ ಜೊತೆಗೆ ಭವಿಷ್ಯದ ಸವಾಲುಗಳನ್ನು ಎದುರಿಸಲು ಉತ್ತಮ ವೇದಿಕೆಯಾಗಿವೆಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಎಸ್.ಎನ್. ನಾಗರಾಜ್, ಸಹಕಾರ್ಯದರ್ಶಿಗಳಾದ ಡಾ. ಪಿ. ನಾರಾಯಣ್, ನಿರ್ದೇಶಕರಾದ ಶ್ರೀ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ, ಶ್ರೀ ಟಿ.ಆರ್. ಗಗನ್, ಶ್ರೀ ಚಾವಿ ಮುರಳೀಧರ್ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಪ್ರಸಾದ್ ಬಿ.ಎಸ್. ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


































