ಮಂಗಳೂರು, ನ.7|ಸಂವಿಧಾನ ಹತ್ತಿಕುವ, ದೇಶವನ್ನು ಆರಾಜಕತೆಗೆ ತಳ್ಳಲು ಪ್ರತಿಪಕ್ಷಗಳು ಪ್ರಯತ್ನ :ಕೇಂದ್ರ ಸಚಿವ ಸುರೇಶ್ ಗೋಪಿ ಆಕ್ರೋಶ ಜನ ವಿರೋಧಿ ನೀತಿಯ ವಿರುದ್ಧ ಬಿಜೆಪಿ ಪ್ರತಿಭಟನೆ ಸಾವಿರಾರು ಕಾರ್ಯಕರ್ತರು ಭಾಗಿ

Picture of Savistara

Savistara

Bureau Report

ಮಂಗಳೂರು: ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿಯ ವಿರುದ್ಧ ಬಿಜೆಪಿ ಮಂಗಳೂರು ವಿಭಾಗ ವತಿಯಿಂದ ನಗರದಲ್ಲಿ ಆಯೋಜಿಸಲಾಗಿದ್ದ ‘ಪ್ರಜಾಪ್ರಭುತ್ವ ಉಳಿಸಿ – ಅರಾಜಕತೆ ಅಳಿಸಿ’ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಯಶಸ್ವಿಯಾಗಿ ನಡೆಯಿತು.ನಗರದ ಕ್ಲಾಕ್ ಟವರ್‌ನಿಂದ ಕನ್ನಡ ಮೈದಾನದವರೆಗೆ ನಡೆದ ಬೃಹತ್ ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ನಂತರ ನಡೆದ ಸಾರ್ವಜನಿಕ ಸಭೆಯನ್ನು ಕೇಂದ್ರ ಪೆಟ್ರೋಲಿಯಂ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಸುರೇಶ್ ಗೋಪಿ ಉದ್ಘಾಟಿಸಿದರು.

Advertisement

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷಗಳು ಸಂವಿಧಾನದ ಭಾವನೆಗಳಿಗೆ ಬೆಲೆ ಕೊಡದೆ ಇರುವುದರಿಂದ ದೇಶದ ಇತಿಹಾಸದಲ್ಲಿಯೇ ಆಡಳಿತ ಪಕ್ಷವೇ ಚುನಾವಣಾ ವಿಚಾರದಲ್ಲಿ ಪ್ರತಿಭಟನೆ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದರು.

Advertisement

“ದೇಶದ ಅಭಿವೃದ್ಧಿ ಮತ್ತು ಸನಾತನ ಧರ್ಮದ ಮೂಲತತ್ವವನ್ನು ಮುನ್ನಡೆಸುತ್ತಿರುವುದನ್ನು ವಿರೋಧಿಸುವವರು ದೇಶದ್ರೋಹಿಗಳೇ. ಎಸ್‌ಐಆರ್ ವಿಚಾರದಲ್ಲಿ ಪ್ರತಿಪಕ್ಷಗಳು ದೇಶದಲ್ಲಿ ಬೆಂಕಿ ಹಚ್ಚಲು ಯತ್ನಿಸಿದವು. ಆ ಬೆಂಕಿಯನ್ನು ನಾವು ಆರಿಸಿದ್ದೇವೆ. ಈಗ ಅವರ ದುರುದ್ದೇಶಗಳನ್ನು ಸಂಪೂರ್ಣವಾಗಿ ಸುಟ್ಟು ಹಾಕುತ್ತೇವೆ. ಇದು ಕೇವಲ ಆರಂಭ ಮಾತ್ರ” ಎಂದು ಅವರು ಹೇಳಿದರು.ಸಭೆಯಲ್ಲಿ ತುಳು ಭಾಷೆಯಲ್ಲಿ ಮಾತನಾಡಿ ಜನರ ಮನಗೆದ್ದ ಸುರೇಶ್ ಗೋಪಿ, ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಿಗೂ ಹೋಗುವುದಿಲ್ಲ, ಸದಾ ದೇಶವನ್ನು ಮುನ್ನಡೆಸುತ್ತಾರೆ ಎಂದು ಹೇಳಿದರು.

Advertisement

ತೇಜಸ್ವಿ ಸೂರ್ಯ ವಾಗ್ದಾಳಿ

Advertisement

ಸಭೆಯಲ್ಲಿ ಮಾತನಾಡಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಕಳೆದ ಎರಡೂವರೆ-ಮೂರು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ದೇಶದ ಚುನಾವಣಾ ವ್ಯವಸ್ಥೆಯ ಮೇಲೆ ಜನರ ನಂಬಿಕೆ ಕಳೆಯುವ ದುರುದ್ದೇಶಪೂರಿತ ಅಭಿಯಾನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.ಬಾಂಗ್ಲಾದೇಶ ಹಾಗೂ ನೇಪಾಳದಲ್ಲಿ ನಡೆದಂತಹ ಅಶಾಂತಿ ಮತ್ತು ರೆಜಿಮ್ ಚೇಂಜ್ ಕ್ರಾಂತಿಯನ್ನು ಭಾರತದಲ್ಲೂ ತರಲು ಕೆಲವು ಶಕ್ತಿಗಳು ಯತ್ನಿಸುತ್ತಿವೆ ಎಂದು ಅವರು ಹೇಳಿದರು.2014, 2019 ಹಾಗೂ 2024ರ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಾಗ ಇವಿಎಂ ಸರಿಯಿತ್ತು. ಅದೇ ಇವಿಎಂನಲ್ಲಿ ಕರ್ನಾಟಕ, ತೆಲಂಗಾಣ ಹಾಗೂ ಕೇರಳದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಹೇಗೆ ಎಂದು ಅವರು ಪ್ರಶ್ನಿಸಿದರು. ಕಾಂಗ್ರೆಸ್ ಸುಮಾರು 95 ಚುನಾವಣೆಗಳಲ್ಲಿ ಸೋತಿದ್ದರೆ ಅದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.

Advertisement

ಗಣ್ಯರ ಉಪಸ್ಥಿತಿ

ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಗುರುರಾಜ್ ಶೆಟ್ಟಿ, ಭಾಗೀರಥಿ ಮುರುಳ್ಯ, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜ, ಯಶಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್, ಎಸ್. ಅಂಗಾರ ಸೇರಿದಂತೆ ಅನೇಕ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!