ಜಿ.ಪಂ ಹಾಗೂ ತಾ.ಪಂ ಚುನಾವಣೆಗೆ ಬ್ಯಾಲೆಟ್‌ ಬಾಕ್ಸ್ ಬಳಕೆ: ಸಚಿವ ಖಂಡ್ರೆ

Picture of Savistara

Savistara

Bureau Report

ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮತಪೆಟ್ಟಿಗೆ ಮೂಲಕ ನಡೆಸಲು ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಮತಪೆಟ್ಟಿಗೆ ಖರೀದಿಗೆ ಚುನಾವಣಾ ಆಯೋಗಕ್ಕೆ 128 ಕೋಟಿ ರೂ. ಹಣವನ್ನೂ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಮತಪೆಟ್ಟಿಗೆ ಮೂಲಕವೇ ಚುನಾವಣೆ, ಮರುಚಿಂತನೆ ಇಲ್ಲ

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಮತಪೆಟ್ಟಿಗೆ ಮೂಲಕ ಚುನಾವಣೆ ನಡೆಸುವುದಾಗಿ ತಿಳಿಸಿದ್ದೇವೆ. ಈ ಸಂಬಂಧ ಮರು ಚಿಂತನೆ ಇಲ್ಲ. ಚುನಾವಣಾ ಆಯೋಗದ ಬಳಿಕ ಈಗಾಗಲೇ ಮತಪೆಟ್ಟಿಗೆಗಳು ಇದ್ದು ಹೆಚ್ಚುವರಿಯಾಗಿ ಅಗತ್ಯವಿರುವ ಮತಪೆಟ್ಟಿಗೆ ಖರೀದಿಗೆ ಈಗಾಗಲೇ ಹಣ ನೀಡಿದ್ದೇವೆ. ಹಣಕಾಸು ಸಮಸ್ಯೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಎಸ್‌ಐಆರ್ ಅನುಸಾರವೇ ಚುನಾವಣೆ?

ಪರಿಷ್ಕೃತ ಮತದಾರರ ಪಟ್ಟಿ ಅನುಸಾರ ಚುನಾವಣೆ ನಡೆಸಲಾಗುತ್ತದೆಯೇ ಎಂಬ ಪ್ರಶ್ನೆಗೆ, ಎಸ್‌ಐಆರ್‌ ಬಳಿಕದ ಪರಿಷ್ಕೃತ ಮತದಾರರ ಪಟ್ಟಿ ಲಭ್ಯವಿರುವ ಬಗ್ಗೆ ಮಾಹಿತಿ ಇಲ್ಲ. ರಾಜ್ಯ ಚುನಾವಣಾ ಆಯೋಗವು ಸ್ವಾಯತ್ತ ಸಂಸ್ಥೆಯಾಗಿದ್ದು, ಯಾವ ಪಟ್ಟಿ ಆಧರಿಸಿ ಚುನಾವಣೆ ನಡೆಸಬೇಕು ಎಂಬುದನ್ನು ಆಯೋಗ ತೀರ್ಮಾನಿಸಲಿದೆ ಎಂದು ಸ್ಪಷ್ಟಪಡಿಸಿದರು.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!