ಬಾಳೆಕುದ್ರು ಶ್ರೀಗಳು ಪರಾರಿಯಾಗಿಲ್ಲ, ವಿಗ್ರಹಗಳೂ ಕಳವಾಗಿಲ್ಲ: ಆಡಳಿತಾಧಿಕಾರಿ ಅನಿಲ್‌ ಕುಮಾ‌ರ್ ಸ್ಪಷ್ಟನೆ

Picture of Savistara

Savistara

Bureau Report

ಉಡುಪಿ: ಬ್ರಹ್ಮಾವರ ಸಮೀಪದ ಹಂಗಾರಕಟ್ಟೆಯ ಬಾಳೆಕುದ್ರು ಮಠದ ಶ್ರೀಗಳು ಮಠ ಬಿಟ್ಟು ಪರಾರಿಯಾಗಿದ್ದಾರೆ ಹಾಗೂ ಮಠದ ಆರು ಪ್ರಾಚೀನ ವಿಗ್ರಹಗಳು ನಾಪತ್ತೆಯಾಗಿದ್ದು, ಅವುಗಳನ್ನು ಮಾರಾಟ ಮಾಡಲಾಗಿದೆ ಎಂಬ ಆರೋಪಗಳನ್ನು ಮಠದ ಆಡಳಿತಾಧಿಕಾರಿ ಎ. ಅನಿಲ್ ಕುಮಾರ್ ತಳ್ಳಿಹಾಕಿದ್ದಾರೆ.

Advertisement

ಈ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಸತ್ಯಕ್ಕೆ ದೂರವಾದವು ಎಂದು ಸ್ಪಷ್ಟಪಡಿಸಿರುವ ಅವರು, ಮಠದ ಎಲ್ಲಾ ವಿಗ್ರಹಗಳು ಶ್ರೀಗಳ ಬಳಿಯೇ ಸುರಕ್ಷಿತವಾಗಿವೆ ಎಂದು ತಿಳಿಸಿದ್ದಾರೆ.

Advertisement

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅನಿಲ್ ಕುಮಾ‌ರ್, ಮಠದ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿಯವರು ಕಾನೂನು ಪ್ರಕ್ರಿಯೆಗಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಮಠ ಬಿಟ್ಟು ಓಡಿಹೋಗಿದ್ದಾರೆ ಅಥವಾ ಮಠಕ್ಕೆ ಬೀಗ ಹಾಕಲಾಗಿದೆ ಎಂಬ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ.

Advertisement

ಆರು ಪ್ರಾಚೀನ ವಿಗ್ರಹಗಳ ಮಾರಾಟ ಆರೋಪ ಹಸಿ ಸುಳ್ಳುಮಠದ ಹಳೆಯ ಭಕ್ತರೊಬ್ಬರು ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಶ್ರೀ ವಾಸುದೇವ ಸದಾಶಿವಾಶ್ರಮ, ಆಡಳಿತಾಧಿಕಾರಿ ಅನಿಲ್ ಕುಮಾರ್, ಸಿಬ್ಬಂದಿ ಜಯಲಕ್ಷ್ಮೀ ಹಾಗೂ ಪುರೋಹಿತ ಶ್ರೇಯಸ್ ಅವರು ಮಠದ ಹಳೆಯ ವಿಗ್ರಹಗಳನ್ನು ಕಳವು ಮಾಡಿ ಬೆಂಗಳೂರಿನ ಪ್ರಸಿದ್ಧ ‘ಐಡಲ್ಸ್’ ಸಂಸ್ಥೆಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೂರಿನ ಆಧಾರದಲ್ಲಿ ಪೊಲೀಸರು ಎಫ್‌ಐಆ‌ರ್ ದಾಖಲಿಸಿದ್ದಾರೆ.

Advertisement

ಆದರೆ, ಈ ಆರೋಪಗಳು ಸಂಪೂರ್ಣ ಸುಳ್ಳು. ಯಾವುದೇ ವಿಗ್ರಹಗಳನ್ನು ಕಳವು ಮಾಡಿಲ್ಲ ಅಥವಾ ಮಾರಾಟ ಮಾಡಿಲ್ಲ. ಎಲ್ಲಾ ವಿಗ್ರಹಗಳು ಶ್ರೀಗಳ ಬಳಿಯೇ ಭದ್ರವಾಗಿವೆ ಎಂದು ಅನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.ಮಠದಲ್ಲಿ ಪೂಜಾ ಕೈಂಕರ್ಯಗಳು ನಿರಂತರ ಶ್ರೀಗಳು ಬೆಂಗಳೂರಿಗೆ ತೆರಳಿರುವುದರಿಂದ ಮಠದಲ್ಲಿ ಪೂಜಾ ಕಾರ್ಯಗಳಿಗೆ ಯಾವುದೇ ತೊಂದರೆಯಾಗಿಲ್ಲ.ಪೂಜೆಗೆ ಚ್ಯುತಿ ಬಾರದಂತೆ ಮಠದಲ್ಲಿ ಓರ್ವ ಪುರೋಹಿತರನ್ನು ನೇಮಿಸಲಾಗಿದ್ದು, ಧಾರ್ಮಿಕ ಕೈಂಕರ್ಯಗಳು ಎಂದಿನಂತೆ ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

Advertisement

ಶ್ರೀಗಳು ಕಾನೂನು ತಜ್ಞರನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಎದುರಿಸುವ ಉದ್ದೇಶದಿಂದ ನಾವೆಲ್ಲರೂ ಇಲ್ಲಿಗೆ ಆಗಮಿಸಿದ್ದೇವೆ. ನಾವು ಯಾವುದೇ ಅನಾಚಾರ ಅಥವಾ ಅಪಚಾರ ಎಸಗಿಲ್ಲ. ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಭಕ್ತರ ಮುಂದೆ ಬಂದು ಎಲ್ಲ ಸತ್ಯಾಂಶಗಳನ್ನು ಹಂಚಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.ಅಲ್ಲದೆ, ಭಕ್ತರು ಹಾಗೂ ಊರಿನವರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಸಹನೆಯಿಂದ ಸಹಕರಿಸಬೇಕು ಎಂದು ಕೈಮುಗಿದು ಮನವಿ ಮಾಡಿದ್ದಾರೆ.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!