ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಕಾರ್ಯಾಚರಣೆ: ಕೃಪಾ ಆಳ್ವ ನಾಲ್ಕು ತಾಸು ವಿಚಾರಣೆ

Picture of Savistara

Savistara

Bureau Report

ಬೆಂಗಳೂರು: ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿರುವ ‘ಸ್ಟಿಂಗ್’ ಕಾರ್ಯಾಚರಣೆಯ ತನಿಖೆ ನಡೆಸುತ್ತಿರುವ ಸೈಬರ್ ಕ್ರೈಂ ಪೊಲೀಸರ ಎದುರು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವ ಅವರು ಸೋಮವಾರ ವಿಚಾರಣೆಗೆ ಹಾಜರಾದರು.

Advertisement

Advertisement

ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿರುವ ಸೈಬರ್ ಕ್ರೈಂ ಪೊಲೀಸ್ ಠಾಣಾ ಕಚೇರಿಯಲ್ಲಿ ತನಿಖಾಧಿಕಾರಿ ಎಸಿಪಿ ರವಿ ಅವರು ಕೃಪಾ ಅವರನ್ನು ಸುಮಾರು ನಾಲ್ಕು ತಾಸು ವಿಚಾರಣೆ ನಡೆಸಿ, ಹಲವು ಪ್ರಶ್ನೆಗಳನ್ನು ಕೇಳಿ, ಹೇಳಿಕೆ ದಾಖಲಿಸಿಕೊಂಡರು.

Advertisement

Advertisement

‘ಯಾವ ಉದ್ದೇಶಕ್ಕಾಗಿ ಸ್ಟಿಂಗ್ ಕಾರ್ಯಾಚರಣೆ ಮಾಡಲಾಗಿತ್ತು? ಬೇರೆಯವರ ಪಾತ್ರವೇನು? ನಿಮ್ಮ ಜತೆ ಯಾರ್‍ಯಾರು ಸಂಚು ನಡೆಸಿದರು? ಎಲ್ಲಿ ವಿಡಿಯೊ ಮಾಡಲಾಗಿದೆ? ಹೀಗೆ ಹಲವಾರು ಪ್ರಶ್ನೆಗಳನ್ನು ತನಿಖಾಧಿಕಾರಿಗಳು ಅವರಿಗೆ ಕೇಳಿ, ಮಾಹಿತಿ ಪಡೆದುಕೊಂಡಿದ್ದಾರೆ.ತನಿಖಾಧಿಕಾರಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೃಪಾ ಆಳ್ವ, ‘ಖಾಸಗಿ ಸುದ್ದಿವಾಹಿನಿಯೊಂದರ ಪತ್ರಕರ್ತ, ಸಂತ್ರಸ್ತೆ ಹಾಗೂ ಮತ್ತೊಬ್ಬ ವ್ಯಕ್ತಿ ಮಾತನಾಡುತ್ತಿದ್ದಾಗ ನಾನು ಸ್ಥಳದಲ್ಲಿ ಇದ್ದೆ. ಸುಮಾರು ಅರ್ಧ ತಾಸು ಸಂಭಾಷಣೆ ನಡೆದಿರಬಹುದು. ಆದರೆ, ಅದು ರೆಕಾರ್ಡ್ ಮಾಡಲಾಗುತ್ತಿದೆ ಎಂಬುದು ತಿಳಿದಿಲ್ಲ. ಅಲ್ಲದೆ, ಈ ಹಿಂದೆ ನೀಡಿದ ಹೇಳಿಕೆಯಂತೆ ವಿಡಿಯೊ ಮಾಡುವ ಉದ್ದೇಶ ಕೂಡ ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

Advertisement

Advertisement

ನವೆಂಬರ್​ 11ರಂದು ಮತ್ತೆ ವಿಚಾರಣೆಗೆ ಬರುವಂತೆ ಪೊಲೀಸರು ಸೂಚಿಸಿದ್ದು, ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ತಾಕೀತು ಮಾಡಿದ್ದಾರೆ. ವಿಚಾರಣೆ ಬಳಿಕ ಹೊರ ಬಂದ ಕೃಪಾ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ನಗುಮುಖದಿಂದಲೇ ಕಾರಿನಲ್ಲಿ ಹೊರಟರು.’ಸ್ಟಿಂಗ್‌’ ಕಾರ್ಯಾಚರಣೆ ಸಂಬಂಧ ಪ್ರಕರಣ ದಾಖಲಾದ ಬೆನ್ನಲ್ಲೇ ಬಂಧನ ಭೀತಿಯಲ್ಲಿ ವಿದೇಶಕ್ಕೆ ಪರಾರಿಯಾಗಿದ್ದ ಕೃಪಾ ಆಳ್ವ ಅವರು ಇತ್ತೀಚೆಗೆ ದೇಶಕ್ಕೆ ಮರಳಿದ್ದರು.

Advertisement

Advertisement

ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು, ಮೊಬೈಲ್ ಮತ್ತು ಲ್ಯಾಪ್‌ಟಾಪ್‌ನೊಂದಿಗೆ ವಿಚಾರಣೆಗೆ ಬರುವಂತೆ ಅವರಿಗೆ ನೋಟಿಸ್‌ ಜಾರಿ ಮಾಡಿದ್ದರು.ಕಳೆದ ವಾರವಷ್ಟೇ ನ್ಯಾಯಾಲಯವು ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿತ್ತು. ತನಿಖಾಧಿಕಾರಿಗಳು ವಿಚಾರಣೆಗೆ ಕರೆದಾಗ ಬರಬೇಕು ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಷರತ್ತು ವಿಧಿಸಿ ಜಾಮೀನು ನೀಡಲಾಗಿತ್ತು.

ಇದಕ್ಕೂ ಮುನ್ನ ಕೃಪಾ ಆಳ್ವ ಪರ ವಕೀಲೆ ನಿಖಿತಾ ಮಾತನಾಡಿ, ‘ಕೃಪಾ ಆಳ್ವ ಅವರು ಈಗಾಗಲೇ ಎರಡು ಬಾರಿ ಡಿಸಿಪಿ ಎದುರು ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಮತ್ತೊಮ್ಮೆ ಬರುವುದಕ್ಕೆ ಸೂಚಿಸಿದ್ದರು. ಹಾಗಾಗಿ ತನಿಖಾಧಿಕಾರಿ ಎದುರು ಹಾಜರಾಗಿದ್ದಾರೆ. ಕೆಲ ದಿನಗಳ ಹಿಂದೆ ಅವರು ಮಗಳೊಂದಿಗೆ ವಿದೇಶಕ್ಕೆ ಹೋಗಿದ್ದರು. ಅದು ಪೂರ್ವನಿಗದಿತ ಪ್ರವಾಸವಾಗಿತ್ತೇ ಹೊರತು ಬೇರೆ ಉದ್ದೇಶವಿಲ್ಲ’ ಎಂದು ತಿಳಿಸಿದರು.

ಪ್ರಕರಣ ಸಂಬಂಧ ಈಗಾಗಲೇ ದೆಹಲಿಯಲ್ಲಿ ರಿತೀಶ್‌ ಪಾಂಡೆ ಅವರನ್ನು ಬಂಧಿಸಿ, ಕೆಲವು ಮಾಹಿತಿಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ. ಯೂಟ್ಯೂಬ್‌ನಲ್ಲಿ ವಿಡಿಯೊ ಅಪ್‌ಲೋಡ್ ಮಾಡುವಂತೆ ಆರೋಪಿಗೆ ಸೂಚಿಸಿದ್ದವರು ಯಾರು, ಪೆನ್‌ಡ್ರೈವ್‌ ತಲುಪಿಸಿದ್ದವರು ಯಾರು ಎಂಬುದರ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅವಹೇಳನಕಾರಿ ಹಾಗೂ ಮಾನಹಾನಿಕರ ವಿಡಿಯೊವೊಂದನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ಅವರು ಅಕ್ಟೋಬರ್ 6 ರಂದು ನಗರದ ಸೈಬರ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ದೂರು ಆಧರಿಸಿ ತನಿಖೆ ನಡೆಯುತ್ತಿದೆ.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

[t4b-ticker]
error: Content is protected !!