GOOD NEWS : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಲ್ಯಾಂಗ್ವೇಜ್ ಲ್ಯಾಬ್ ಶೀಘ್ರ ಆರಂಭ : ಸಚಿವ ಯು.ಟಿ.ಖಾದರ್ ಘೋಷಣೆ

Picture of Savistara

Savistara

Bureau Report

ಬೆಂಗಳೂರು: ವಿದ್ಯಾರ್ಥಿಗಳಿಗೆ ಹೆಚ್ಚಿನ ಭಾಷೆಗಳ ಕಲಿಕೆಗೆ ಅನುಕೂಲವಾಗುವಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ‘ಲ್ಯಾಂಗ್ವೇಜ್ ಲ್ಯಾಬ್’ (ಭಾಷಾ ಪ್ರಯೋಗಾಲಯ) ಆರಂಭಿಸಲು ಯೋಜನೆ ರೂಪಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಘೋಷಿಸಿದ್ದಾರೆ..

Advertisement

Advertisement

ನಗರದ ಪುರಭವನದಲ್ಲಿ ಆಯೋಜಿಸಲಾಗಿದ್ದ ಉರ್ದು ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

Advertisement

Advertisement

ಇಂದು ಇಡೀ ಪ್ರಪಂಚವೇ ಒಂದು ಗ್ಲೋಬಲ್ ವಿಲೇಜ್ (ಜಾಗತಿಕ ಹಳ್ಳಿ) ಆಗಿದ್ದು, ವಿದ್ಯಾರ್ಥಿಗಳು ಹೆಚ್ಚು ಭಾಷೆಗಳನ್ನು ಕಲಿಯುವುದರಿಂದ ಅವರಿಗೆ ಉದ್ಯೋಗ ಹಾಗೂ ಇತರೆ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳ ಪ್ರಮಾಣ ಹೆಚ್ಚಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.

Advertisement

Advertisement

ಅವಕಾಶಗಳ ದೃಷ್ಟಿಯಿಂದ ಇಂದಿನ ಮಕ್ಕಳು ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಸ್ಪ್ಯಾನಿಷ್ ಹಾಗೂ ಫ್ರೆಂಚ್ ಸೇರಿದಂತೆ ವಿವಿಧ ಭಾಷೆಗಳನ್ನು ಕಲಿಯುವುದು ಅಗತ್ಯ ಎಂದು ಸಚಿವರು ಸಲಹೆ ನೀಡಿದರು.

Advertisement

Advertisement

ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಭಾಷಾ ಕಲಿಕೆಯಲ್ಲಿ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ, ಸಮಾಜದಲ್ಲಿ ಎಲ್ಲ ಜಾತಿ ಮತ್ತು ಧರ್ಮದ ಜನರು ಸಹೋದರತೆಯಿಂದ ಬಾಳಬೇಕು ಹಾಗೂ ರಾಜ್ಯ ಮತ್ತು ದೇಶದ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

[t4b-ticker]
error: Content is protected !!