
ದ.ಕ. ಸಂಸದ ಕ್ಯಾ. ಚೌಟ ಭಾಗಿ
ಬೆಂಗಳೂರು: ಅಡುಗೆ ಎಣ್ಣೆ, ಹಾಲು, ವಿದ್ಯುತ್ ಹಾಗೂ ಪ್ರಯಾಣ ದರ ಸೇರಿದಂತೆ ದಿನನಿತ್ಯದ ಬದುಕಿಗೆ ಅತ್ಯಗತ್ಯವಾದ ಪ್ರತಿಯೊಂದು ವಸ್ತು ಮತ್ತು ಸೇವೆಯ ಬೆಲೆಯನ್ನು ಸಾಲು ಸಾಲಾಗಿ ಏರಿಸಿ, ರಾಜ್ಯದ ಜನತೆಯನ್ನು ತೀವ್ರ ಆರ್ಥಿಕ ಸಂಕಷ್ಟಕ್ಕೆ ತಳ್ಳಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ( ನ.11) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
Advertisement



ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಚಲವಾದಿ ಟಿ. ನಾರಾಯಣಸ್ವಾಮಿ ಅವರೊಂದಿಗೆ ರಾಜ್ಯ ಬಿಜೆಪಿ ಕಾರ್ಯದರ್ಶಿ ಹಾಗೂ ದ.ಕ. ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭಾಗವಹಿಸಿದ್ದರು.
Advertisement

ಹೆಚ್ಚಿಸಿರುವ ಬೆಲೆಗಳನ್ನು ತಕ್ಷಣವೇ ಹಿಂಪಡೆಯಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.
Advertisement

Advertisement









































