ಬೆಂಗಳೂರು: ಮೆಟ್ರೋ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಭಾಷಣವನ್ನು ಕೈಬಿಟ್ಟಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
Advertisement

ಸಭಾ ಕಾರ್ಯಕ್ರಮದ ಪ್ರಾಥಮಿಕ ಡ್ರಾಫ್ಟ್‌ನಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರ ಭಾಷಣಕ್ಕೆ ಅವಕಾಶ ನಿಗದಿಯಾಗಿತ್ತು. ಆದರೆ ನಿನ್ನೆ ರಾತ್ರಿ ಬಿಡುಗಡೆಯಾದ ಅಂತಿಮ ಪಟ್ಟಿಯಲ್ಲಿ ಅವರ ಹೆಸರೇ ಇಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ.
Advertisement

Advertisement

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ, “ಬಹುತೇಕ ಬಂಡವಾಳ ಖರ್ಚು ನಮ್ಮದು. ಕರ್ನಾಟಕಕ್ಕೆ ನ್ಯಾಯಯುತ ಪಾಲು ಕೇಳಿದರೆ ಈ ರೀತಿ ಶಿಕ್ಷೆ ಕೊಡಬೇಕಾ?” ಎಂದು ಪ್ರಶ್ನಿಸಿದ್ದಾರೆ.
Advertisement

Advertisement

“ಪರವಾಗಿಲ್ಲ, ನೀವು ನನ್ನ ಮಾತನ್ನು ಕಟ್ ಮಾಡಬಹುದು. ಆದರೆ ಬೆಂಗಳೂರಿನ ಅಭಿವೃದ್ಧಿಗೆ ಕೆಲಸ ಮಾಡುವುದನ್ನು ನಿಲ್ಲಿಸಲು ಆಗುವುದಿಲ್ಲ.
Advertisement

Advertisement

ಇನ್ನೂ ಹೆಚ್ಚಿನ ಪರಿಶ್ರಮದಿಂದ ಕೆಲಸ ಮಾಡುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.










































