
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ತುಮಕೂರಿನ ಗುಬ್ಬಿಯಲ್ಲಿರುವ ಚೆನ್ನಬಸವೇಶ್ವರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ರಾಜ್ಯಾದ್ಯಂತ 8 ವಿಭಾಗಗಳ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಅನನ್ಯ.ಕೆ.ಬಿ ಈ ಕೂಟದ ಉತ್ತಮ ಆಟಗಾರ್ತಿಯಾಗಿ ಆಯ್ಕೆಯಾಗಿದ್ದಾರೆ.

ತಮ್ಮದೇ ಕಾಲೇಜಿನಲ್ಲಿ ನಡೆದ ಮಂಗಳೂರು ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಕಾಲೇಜು ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿ, ರಾಜ್ಯಮಟ್ಟಕ್ಕೆ ಅರ್ಹತೆ ಗಳಿಸಿಕೊಂಡಿತ್ತು.

ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಅರ್ಪಿತಾ ಬಾಲಚಂದ್ರ ನಾಯ್ಕ್ ಅವರ ಸಮರ್ಥ ನಾಯಕತ್ವದಲ್ಲಿ ತಂಡವು ಅಮೋಘ ಸಾಧನೆ ಮಾಡಿದ್ದು, ತೃತೀಯ ವರ್ಷದ ಎಐಎಂಎಲ್ ವಿಭಾಗದ ಶ್ರಾವ್ಯ ಅಂಚನ್.ವೈ.ವೈ, ಪ್ರಥಮ ವರ್ಷದ ಎಂಬಿಎ ವಿಭಾಗದ ಸೌಮ್ಯಾ ರೈ, ಪ್ರಥಮ ವರ್ಷದ ಎಐಎಂಎಲ್ ವಿಭಾಗದ ಪ್ರಶಸ್ತಿ.ಬಿ, ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ರಚನಾ.ಕೆ.ಡಿ, ಪ್ರಥಮ ವರ್ಷದ ಎಐಎಂಎಲ್ ವಿಭಾಗದ ಅನುಶ್ರೀ.ಎಂ.ಎಚ್, ದ್ವಿತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ಅನನ್ಯ.ಕೆ.ಬಿ, ತೃತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ತೇಜಶ್ವಿ.ಯು, ತೃತೀಯ ವರ್ಷದ ಡಾಟಾ ಸೈನ್ಸ್ ವಿಭಾಗದ ಸೃಜನಾ.ಎಸ್, ತೃತೀಯ ವರ್ಷದ ಎಐಎಂಎಲ್ ವಿಭಾಗದ ಮಂಜುಶ್ರೀ.ಎನ್, ಪ್ರಥಮ ವರ್ಷದ ಡಾಟಾ ಸೈನ್ಸ್ ವಿಭಾಗದ ನಿಹಾರಿಕಾ.ಎಂ.ಎಸ್, ದ್ವಿತೀಯ ವರ್ಷದ ಎಂಸಿಎ ವಿಭಾಗದ ರೇಷ್ಮಾ, ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಮನೀಶಾ ಮತ್ತು ದ್ವಿತೀಯ ವರ್ಷದ ಡಾಟಾ ಸೈನ್ಸ್ ವಿಭಾಗದ ವಾಣಿ ಲಕ್ಷ್ಮಣ್ ಲಮಾಣಿ ವಿಜೇತ ತಂಡದ ಸದಸ್ಯರಾಗಿದ್ದಾರೆ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ರಾಷ್ಟ್ರೀಯ ಆಟಗಾರ ಸತ್ಯಮ್.ಡಿ.ಜಿ ಮತ್ತು ಲಕ್ಷ್ಮಣ್ ಪಡ್ನೂರು ಅವರು ವಿಜೇತ ತಂಡಕ್ಕೆ ತರಬೇತಿ ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ. ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.












































