
ಬಹುನಿರೀಕ್ಷಿತ ಬೆಂಗಳೂರು – ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದ್ದಾರೆ.
ಮಂಗಳೂರು ಜಂಕ್ಷನ್‌ನಿಂದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಉದ್ಘಾಟನಾ ವಿಶೇಷ ರೈಲಿಗೆ ಚಾಲನೆ ನೀಡಿದ್ದು, ಸುಬ್ರಹ್ಮಣ್ಯ ರಸ್ತೆವರೆಗೆ ಈ ರೈಲಿನಲ್ಲಿ ಪ್ರಯಾಣ ಮಾಡಿದರು.

ಈ ವೇಳೆ ಪುತ್ತೂರು ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ರೈಲು ನಿಲುಗಡೆಗೊಂಡಾಗ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭರ್ಜರಿ ಸ್ವಾಗತ ನೀಡಿದರು. ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಜನರು ಹೂಮಳೆಗರೆದು, ಘೋಷಣೆಗಳೊಂದಿಗೆ ಸಂಭ್ರಮಿಸಿದರು. ಜನರಲ್ಲಿ ಹರ್ಷ ಮನೆ ಮಾಡಿತ್ತು.

ಈ ಸಂದರ್ಭದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಕಿಶೋರ್ ಕುಮಾರ್, ಭಾಗೀರಥಿ ಮುರುಳ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಪ್ರಸನ್ನ ದರ್ಬೆ, ನಂದನ್ ಮಲ್ಯ ಸೇರಿದಂತೆ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ರೈಲು ಸಂಚಾರದಿಂದ ಕರಾವಳಿ ಭಾಗದ ಜನರಿಗೆ ಬೆಂಗಳೂರು ಸಂಪರ್ಕ ಮತ್ತಷ್ಟು ವೇಗ ಹಾಗೂ ಸುಲಭವಾಗಲಿದೆ ಎಂದು ನಾಯಕರು ಹರ್ಷ ವ್ಯಕ್ತಪಡಿಸಿದರು.











































