ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಂದ ಸುಬ್ರಹ್ಮಣ್ಯ ರೋಡ್ ನಿಲ್ದಾಣಕ್ಕೆ ಭೇಟಿ – ಸಂಸದ ಕ್ಯಾ. ಬ್ರಿಜೇಶ್ ಚೌಟ ಸಾಥ್

Picture of Savistara

Savistara

Bureau Report

ಸಂಚಾರ ಆರಂಭಿಸಿದ ವಂದೇ ಭಾರತ್ ರೈಲಿನಲ್ಲಿ ಬಂದ ಸಚಿವರಿಗೆ ಭವ್ಯ ಸ್ವಾಗತ

ಕೇಂದ್ರ ರೈಲ್ವೇ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಖಾತೆಗಳ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಇಂದು ಅಮೃತ್ ಭಾರತ್ ಯೋಜನೆಯಲ್ಲಿ ನವೀಕರಣಗೊಂಡ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದರು.

Advertisement

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಮೃತ್ ಭಾರತ್ ನಿಲ್ದಾಣ’ ಯೋಜನೆಯಡಿ ಆಧುನಿಕ ಸೌಲಭ್ಯಗಳೊಂದಿಗೆ ನವೀಕರಣಗೊಂಡಿರುವ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗಿದೆ.

Advertisement

ನೂತನವಾಗಿ ಸಂಚಾರ ಆರಂಭಿಸಿದ ವಂದೇ ಭಾರತ್ ರೈಲಿನಲ್ಲಿ ಆಗಮಿಸಿದ ಸಚಿವರು ವೇದಿಕೆ ಏರಿ ಮಾತನಾಡಿದರು.

Advertisement

ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ರೈಲ್ವೆ ಮಂಡಳಿ ಸಲಹಾ ಸಮಿತಿ ಮಾಜಿ ಸದಸ್ಯ ವೆಂಕಟ್ ದಂಬೆಕೋಡಿ, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಸನ್ನ ದರ್ಬೆ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಮೊದಲಾದವರು ಉಪಸ್ಥಿತರಿದ್ದರು.

Advertisement

Advertisement
[t4b-ticker]
error: Content is protected !!