ಮಧ್ಯಮ ವರ್ಗದ ಜನರ ಉಳಿತಾಯವನ್ನು ಹೆಚ್ಚಿಸುವುದು ಮತ್ತು ಅವರ ಕೈಯಲ್ಲಿ ಹೆಚ್ಚಿನ ಹಣ ಉಳಿಯುವಂತೆ ಮಾಡುವುದು ಕೇಂದ್ರ ಸರ್ಕಾರದ ನಿರಂತರ ಪ್ರಯತ್ನವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು.

ವಾರ್ಷಿಕ ₹12 ಲಕ್ಷದವರೆಗಿನ ಆದಾಯಕ್ಕೆ ಆದಾಯ ತೆರಿಗೆಯಿಂದ ವಿನಾಯಿತಿ, ಹಿರಿಯ ನಾಗರಿಕರು ಮತ್ತು ಬಾಡಿಗೆ ಆದಾಯ ಪಡೆಯುವವರಿಗೆ ಅನುಕೂಲವಾಗುವಂತೆ ಟಿಡಿಎಸ್ (TDS) ನಿಯಮಗಳಲ್ಲಿ ತಿದ್ದುಪಡಿ,


ಹಾಗೂ ಮುಂದಿನ ತಲೆಮಾರಿನ ಜಿಎಸ್‌ಟಿ ಸುಧಾರಣೆಗಳ ಮೂಲಕ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಇಳಿಕೆ ಸೇರಿದಂತೆ ಹಲವು ಕ್ರಮಗಳನ್ನು ಅವರು ಉಲ್ಲೇಖಿಸಿದರು.


“ವೈಯಕ್ತಿಕ ಆರೋಗ್ಯ ವಿಮೆ ಮತ್ತು ಜೀವ ವಿಮೆಯ ಮೇಲಿನ ಜಿಎಸ್‌ಟಿಯನ್ನು ರದ್ದುಗೊಳಿಸುವ ಮೂಲಕ ವಿಮಾ ಸೌಲಭ್ಯವನ್ನು ಜನರಿಗೆ ಮತ್ತಷ್ಟು ಕೈಗೆಟುಕುವಂತೆ ಮಾಡಿದ್ದೇವೆ” ಎಂದು ಪ್ರಧಾನಿ ತಿಳಿಸಿದರು.


ಕರ್ನಾಟಕದಲ್ಲಿ ಇಂದು ಚಾಲನೆ ನೀಡಲಾದ ವಿವಿಧ ಅಭಿವೃದ್ಧಿ ಯೋಜನೆಗಳು ದೇಶದ ಅಭಿವೃದ್ಧಿಯ ವೇಗವನ್ನು ಮತ್ತಷ್ಟು ಹೆಚ್ಚಿಸಲಿವೆ ಎಂದು ತಿಳಿಸಿದ ಪ್ರಧಾನಮಂತ್ರಿಗಳು, ರಾಜ್ಯದ ಜನತೆಗೆ ಶುಭಾಶಯಗಳನ್ನು ಸಲ್ಲಿಸಿ ಭಾಷಣ ಮುಕ್ತಾಯಗೊಳಿಸಿದರು.

“ಮಧ್ಯಮ ವರ್ಗದ ಜನರ ಉಳಿತಾಯ ಹೆಚ್ಚಬೇಕು, ಅವರ ಖರೀದಿ ಸಾಮರ್ಥ್ಯ ಬಲಗೊಳ್ಳಬೇಕು.

ತಮ್ಮ ಕುಟುಂಬದ ಕನಸುಗಳನ್ನು ನನಸಾಗಿಸುವುದರ ಜೊತೆಗೆ ದೇಶದ ಆರ್ಥಿಕ ಪ್ರಗತಿಯಲ್ಲಿಯೂ ಅವರು ಪಾಲುದಾರರಾಗಬೇಕು ಎಂಬುದು ನಮ್ಮ ಪ್ರಯತ್ನವಾಗಿದೆ” – ಪ್ರಧಾನಿ ನರೇಂದ್ರ ಮೋದಿ









































