ಮೋಹನ ಆಳ್ವರ ಅಮೃತ ಮಹೋತ್ಸವ: 15 ಕೋಟಿ ರೂ.ಗಳ ಸಮಾಜಮುಖಿ ಯೋಜನೆಗೆ ಚಿಂತನೆ

Picture of Savistara

Savistara

Bureau Report

ಮೂಡುಬಿದಿರೆ: ಡಾ. ಎಂ. ಮೋಹನ ಆಳ್ವರ 75ನೇ ವರ್ಷದ ಅಮೃತ ಮಹೋತ್ಸವವನ್ನು ಸಮಾಜಕ್ಕೆ ಶಾಶ್ವತ ಕೊಡುಗೆ ನೀಡುವ ಸೇವಾ ಕಾರ್ಯಗಳ ಮೂಲಕ ಆಚರಿಸಲು ಉದ್ದೇಶಿಸಲಾಗಿದೆ.ಈ ನಿಟ್ಟಿನಲ್ಲಿ ಸುಮಾರು 15 ಕೋಟಿ ರೂ. ವೆಚ್ಚದ ಸಮಾಜಮುಖಿ ಯೋಜನೆಗಳನ್ನು ರೂಪಿಸುವ ಚಿಂತನೆ ನಡೆಸಲಾಗಿದ್ದು, ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯ ಅಭಿವೃದ್ಧಿ, 10 ಸಾವಿರ ಮಂದಿಗೆ ಉಚಿತ ಡಯಾಲಿಸಿಸ್ ಹಾಗೂ ವೃದ್ಧರ ಘನತೆಯ ಬದುಕಿಗೆ ನೆರವಾಗುವ ‘ಹ್ಯಾಪಿ ಡೆತ್’ ಯೋಜನೆಗಳನ್ನು ಅನುಷ್ಠಾನಗೊಳಿಸುವ ಆಶಯ ಹೊಂದಲಾಗಿದೆ ಎಂದು ಉದ್ಯಮಿ ಶಶಿಧರ ಶೆಟ್ಟಿ ಬರೋಡ ತಿಳಿಸಿದರು.

Advertisement

ಡಾ. ಎಂ. ಮೋಹನ ಆಳ್ವ ಅಭಿನಂದನಾ ಸಮಿತಿ-2027ರ ಆಶ್ರಯದಲ್ಲಿ ಶನಿವಾರ ಪಿಲಿಕುಳದ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.ಮೋಹನ ಆಳ್ವರು ಶಿಕ್ಷಣ, ಆರೋಗ್ಯ ಹಾಗೂ ಸಮಾಜ ಸೇವೆಯ ಮೂಲಕ ಸಾವಿರಾರು ಜನರ ಬದುಕಿಗೆ ಆಸರೆಯಾಗಿದ್ದಾರೆ. ಅಮೃತ ಮಹೋತ್ಸವವನ್ನು ಕೇವಲ ಅಭಿನಂದನೆ ಮತ್ತು ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಕ್ಕೆ ಉಪಯುಕ್ತವಾದ ಯೋಜನೆಗಳ ಮೂಲಕ ಅರ್ಥಪೂರ್ಣಗೊಳಿಸುವುದು ಸಮಿತಿಯ ಉದ್ದೇಶವಾಗಿದೆ.

Advertisement

Advertisement

ಆಳ್ವರಿಂದ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಗುರುದಕ್ಷಿಣೆ ಪರಿಕಲ್ಪನೆಯಡಿ ನಿಧಿ ಸಂಗ್ರಹಿಸಿ, ಆರೋಗ್ಯ ಸೇವಾ ಯೋಜನೆಗಳಿಗೆ ವಿನಿಯೋಗಿಸುವ ಚಿಂತನೆಯೂ ಇದೆ.

Advertisement

ಸಮಾಜಕ್ಕೆ ಕೊಡುಗೆಯಾಗಲಿ ಅಮೃತ ಮಹೋತ್ಸವ: ಮೋಹನ ಆಳ್ವ ತಮ್ಮ ಅಮೃತ ಮಹೋತ್ಸವ ಆಚರಣೆಗೆ ಮುಂದಾಗಿರುವ ಆತ್ಮೀಯರು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಡಾ. ಮೋಹನ ಆಳ್ವ ಕೃತಜ್ಞತೆ ಸಲ್ಲಿಸಿದರು. ಅಮೃತ ಮಹೋತ್ಸವವು ಕೇವಲ ಜನ್ಮದಿನದ ಆಚರಣೆಯಾಗದೆ, ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಅರ್ಥಪೂರ್ಣ ಕಾರ್ಯಕ್ರಮವಾಗಬೇಕು.

Advertisement

ಯಾವುದೇ ವೈಭವ ಬಯಸುವುದಿಲ್ಲ. ಬದಲಾಗಿ, ಸಮಾಜಕ್ಕೆ ಉಪಯುಕ್ತವಾಗುವ ಸೇವಾ ಕಾರ್ಯಗಳ ಮೂಲಕ ಈ ದಿನವನ್ನು ಸಾರ್ಥಕಗೊಳಿಸಬೇಕು ಎಂದರು.ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮಾತನಾಡಿ, ಡಾ. ಮೋಹನ ಆಳ್ವರ ಕನಸುಗಳಿಗೆ ಎಲ್ಲರೂ ಒಗ್ಗೂಡಿ ಜೀವ ತುಂಬಬೇಕು.

Advertisement

Advertisement

ಈ ಸಾರ್ಥಕ ಕಾರ್ಯದಲ್ಲಿ ಪೇಜಾವರ ಮಠವೂ ಭಾಗಿಯಾಗುತ್ತಿರುವುದು ಸಂತಸ ಎಂದರು. ಇದೇ ಸಂದರ್ಭದಲ್ಲಿ ಒಂದು ಲಕ್ಷ ರೂ.ಗಳ ಕೊಡುಗೆಯನ್ನು ಘೋಷಿಸಿದರು.ಅಧ್ಯಕ್ಷತೆ ವಹಿಸಿದ್ದ ಡಾ. ಪ್ರಕಾಶ್ ಶೆಟ್ಟಿ ಬಂಜಾರ, ಮಾಜಿ ಸಚಿವ ರಮಾನಾಥ ರೈ, ಚಂದ್ರಹಾಸ ಶೆಟ್ಟಿ ಮಾತನಾಡಿದರು.*ಫೆ. 13ರಂದು ಅಮೃತ ಮಹೋತ್ಸವ*ಅಮೃತ ಮಹೋತ್ಸವವನ್ನು 2027ರ ಫೆಬ್ರವರಿ 13ರಂದು ಮೂಡುಬಿದಿರೆಯಲ್ಲಿ ಆಯೋಜಿಸಲು ನಿರ್ಧರಿಸಲಾಯಿತು.

ಗೌರವಾಧ್ಯಕ್ಷರಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಅಧ್ಯಕ್ಷರಾಗಿ ಡಾ. ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಶಶಿಧರ ಶೆಟ್ಟಿ ಬರೋಡ ಮತ್ತು ಚಂದ್ರಹಾಸ ಶೆಟ್ಟಿ, ಕೋಶಾಧಿಕಾರಿಯಾಗಿ ಲೀಲಾಕ್ಷ ಕರ್ಕೇರ ಆಯ್ಕೆಯಾದರು.ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ರಾಜೇಶ್ ನ್ಯಾಕ್, ಮಾಜಿ ಸಚಿವರಾದ ಅಭಯಚಂದ್ರ ಜೈನ್, ಕೃಷ್ಣ ಪಾಲೇಮರ್, ಬಿ. ನಾಗರಾಜ ಶೆಟ್ಟಿ, ಕಟೀಲಿನ ಲಕ್ಷ್ಮೀನಾರಾಯಣ ಅಸ್ರಣ್ಣರು, ಎಂ.ಬಿ. ಪುರಾಣಿಕ್, ಶ್ರೀಪತಿ ಭಟ್, ಮೀನಾಕ್ಷಿ ಆಳ್ವ ಸೇರಿದಂತೆ ಹಲವಾರು ಗಣ್ಯರು ಇದ್ದರು.

[t4b-ticker]
error: Content is protected !!