ಪುತ್ತೂರು : ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘ ಆಯ್ಕೆ

Picture of Savistara

Savistara

Bureau Report

ದ.ಕ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಪುತ್ತೂರಿನ ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘ ನಿಯಮಿತವು ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Advertisement

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಸಂಘವು ಭಾಜನವಾಗಿದ್ದು, ಜಿಲ್ಲೆಯ ಸಹಕಾರ ಕ್ಷೇತ್ರಕ್ಕೆ ಹೆಮ್ಮೆಯ ಗರಿ ಮೂಡಿಸಿದೆ.ನ. 20ರ ಶುಕ್ರವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.

Advertisement

Advertisement

ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರೂ ಆದ ಶಾಸಕ ಜಿ.ಟಿ. ದೇವೇಗೌಡ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಉಭಯ ಜಿಲ್ಲೆಗಳ ಸಂಸದರು, ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

Advertisement

Advertisement

ಸಹಕಾರ ಕ್ಷೇತ್ರದಲ್ಲಿ ಸಂಘವು ಮಾಡಿರುವ ಸಾಧನೆ, ಜೇನು ಕೃಷಿಕರಿಗೆ ನೀಡುತ್ತಿರುವ ಪ್ರೋತ್ಸಾಹ ಹಾಗೂ ಸಂಘದ ವಿವಿಧ ಚಟುವಟಿಕೆಗಳನ್ನು ಪರಿಗಣಿಸಿ ಈ ಪ್ರತಿಷ್ಠಿತ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Advertisement
[t4b-ticker]
error: Content is protected !!