ಗೌರವಧನ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆಗಳ ಈಡೇರಿಕೆಗಾಗಿ ಸಾವಿರಾರು ಆಶಾ ಕಾರ್ಯಕರ್ತೆಯರು ಬೀದಿಗಿಳಿದು ಹೋರಾಟ ಮುಂದುವರಿಸಿದ್ದಾರೆ.

ಕೊರೆಯುವ ಚಳಿಯನ್ನೂ ಲೆಕ್ಕಿಸದೇ ಪ್ರತಿಭಟನಾಕಾರರು ಸ್ಥಳದಲ್ಲಿ ಠಿಕಾಣಿ ಹೂಡಿದ್ದು, ಇಬ್ಬರು ಆಶಾ ಕಾರ್ಯಕರ್ತೆಯರು ಅಸ್ವಸ್ಥರಾಗಿದ್ದಾರೆ.ಈ ಪ್ರತಿಭಟನೆಯ ಸಂದರ್ಭದಲ್ಲಿ ರಾಯಚೂರಿನಿಂದ ಬಂದಿದ್ದ 45 ವರ್ಷದ ಚಾಂದ್ ಬಿ ಮತ್ತು ದಾವಣಗೆರೆಯ 50 ವರ್ಷದ ರಾಧಾ ಎಂಬ ಇಬ್ಬರು ಕಾರ್ಯಕರ್ತೆಯರು ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಅವರನ್ನು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆನೀಡಲಾಗುತ್ತಿದೆ


ಚಳಿ ಮತ್ತು ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದಾರೆ ಎಂದು ಸೂಚಿಸಲಾಗಿದೆ. ಆಶಾ ಕಾರ್ಯಕರ್ತೆಯರು ₹ 15,000 ಗೌರವಧನ ಮೊತ್ತಕ್ಕೆ ಹೋಲಿಸಿದರೆ. ಕಳೆದ ಸರ್ಕಾರ ನೀಡಿದ್ದ ಭರವಸೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೋರಾಟಕ್ಕೆ ಸಾರ್ವಜನಿಕರ ಬೆಂಬಲಕ್ಕಾಗಿ ಮೆಜೆಸ್ಟಿಕ್, ರೈಲ್ವೇ ನಿಲ್ದಾಣ, ಕೋರ್ಟ್ ಮತ್ತು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕರಪತ್ರಗಳು ಹಂಚುತ್ತಿದ್ದಾರೆ.


ಬೇಡಿಕೆಗಳಿಗೆ ಭರವಸೆ ಸಿಗುವವರೆಗೂ ಪ್ರತಿಭಟನೆ ಕೈಬಿಡುತ್ತದೆ ಎಂದು ಆಶಾ ಕಾರ್ಯಕರ್ತೆಯರು ದೃಢವಾಗಿ ಹೇಳಿದ್ದಾರೆ. ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳು ಮನವೊಲಿಸಲು ಪ್ರಯತ್ನಿಸಿದರೂ ಸಫಲವಾಗಿಲ್ಲ. ಆರ್ಥಿಕ ಭದ್ರತೆ ಸಿಗುವವರೆಗೂ ಗೌರವಧನ ಎಂದು ಮಾಡುವವರೆಗೂ ಯಾವ ಕಾರಣಕ್ಕೂ ಫ್ರೀಡಂ ಪಾರ್ಕ್ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ ಕಾರ್ಯಕರ್ತರು ಹಿಡಿದು ಕುಳಿತಿದ್ದಾರೆ.













































