ಶಿವಮೊಗ್ಗ, ನ. 19 ಬೆಳೆ ವಿಮೆ ಪರಿಹಾರ ತಾರತಮ್ಯ ಖಂಡಿಸಿ ರೈತರ ಪ್ರತಿಭಟನೆ |ಸ್ಥಳಕ್ಕೆ ಸಂಸದ ಬಿವೈ ರಾಘವೇಂದ್ರ ಭೇಟಿ ರೈತರೊಂದಿಗೆ ಚರ್ಚೆ

Picture of Savistara

Savistara

Bureau Report

ಶಿವಮೊಗ್ಗ:2024-25 ಹಾಗೂ 2025-26ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿನ ತಾರತಮ್ಯ ಮತ್ತು ಅನ್ಯಾಯವನ್ನು ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು

Advertisement

ರೈತರು ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ರೈತ ಬಾಂಧವರ ಅಹವಾಲುಗಳನ್ನು ಆಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ ಅವರು ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದು,

Advertisement

Advertisement

ರೈತರ ಸಮಸ್ಯೆಗಳ ಕುರಿತು ಸ್ಥಳದಲ್ಲೇ ಗಂಭೀರವಾಗಿ ಚರ್ಚಿಸಲಾಯಿತು.

Advertisement

ಈ ಹಿಂದೆ ನಡೆದ ಸಭೆಯಲ್ಲಿ ಚರ್ಚಿಸಿದಂತೆ, ದುರಸ್ತಿಯಲ್ಲಿರುವ ಮಳೆ ಮಾಪನ ಕೇಂದ್ರಗಳು ಹಾಗೂ KSNMDC ಮತ್ತು KPTCL ಮಳೆ ಅಂಕಿ-ಅಂಶಗಳ ನಡುವಿನ ವ್ಯತ್ಯಾಸದಿಂದ ರೈತರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ,

Advertisement

Advertisement

ತಕ್ಷಣವೇ ನ್ಯಾಯಯುತ ಪರಿಹಾರ ಮತ್ತು ಪ್ರೀಮಿಯಂ ಮೊತ್ತವನ್ನು ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

ಅನ್ನದಾತರ ಸಂಕಷ್ಟಗಳಿಗೆ ಸ್ಪಂದಿಸಿ, ಅವರಿಗೆ ನ್ಯಾಯ ಒದಗಿಸುವವರೆಗೂ ನಾವು ಸದಾ ರೈತರ ಪರವಾಗಿ ನಿಲ್ಲುತ್ತೇವೆ ಎಂದು ಮುಖಂಡರು ಭರವಸೆ ನೀಡಿದರು.

[t4b-ticker]
error: Content is protected !!