ಶಿಶಿಲ-ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ರಿಂದಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

Picture of Savistara

Savistara

Bureau Report

ಮಂಗಳೂರು :ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ನಡುವಿನ ಸಂಪರ್ಕ ಕೊಂಡಿಯಾಗಿರುವ ಶಿಶಿಲ-ಬೈರಾಪುರ ರಸ್ತೆ ಅಭಿವೃದ್ಧಿಯು ಈ ಭಾಗದ ಜನರ ಬಹುದಶಕಗಳ ಬೇಡಿಕೆಯಾಗಿದೆ.ಈ ಹಿನ್ನೆಲೆಯಲ್ಲಿ ರಸ್ತೆ ಸಂಪರ್ಕದ ಬೇಡಿಕೆಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ವಿಶೇಷ ಮುತುವರ್ಜಿ ವಹಿಸಿದ್ದಾರೆ.

Advertisement

ಇತ್ತೀಚೆಗೆ ಅರಸಿನಮಕ್ಕಿಯಲ್ಲಿ ನಡೆದ ಹಕ್ಕೊತ್ತಾಯ ಸಮಾವೇಶದಲ್ಲಿ ಭಾಗವಹಿಸಿದ್ದ ಶಾಸಕರು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ರಸ್ತೆ ಸಂಪರ್ಕದ ಸಾಧ್ಯತೆಗಳ ಕುರಿತು ಸಮಗ್ರ ಯೋಜನಾ ವರದಿ ಸಿದ್ಧಪಡಿಸುವ ಭರವಸೆ ನೀಡಿದ್ದರು.ಇದರ ಮುಂದುವರಿದ ಭಾಗವಾಗಿ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು.

Advertisement

Advertisement

ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಪ್ರಸ್ತಾವಿತ ರಸ್ತೆ ಮಾರ್ಗದ ತಾಂತ್ರಿಕ ಸಾಧ್ಯತೆಗಳು, ಅರಣ್ಯ ಪ್ರದೇಶಕ್ಕೆ ಸಂಬಂಧಿಸಿದ ನಿಯಮಗಳು, ಅಗತ್ಯ ಅನುಮತಿಗಳು, ಭೂಮಿಯ ಸ್ವರೂಪ ಹಾಗೂ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ವಿವಿಧ ತಾಂತ್ರಿಕ ಅಂಶಗಳ ಕುರಿತು ಚರ್ಚಿಸಲಾಯಿತು.

Advertisement

Advertisement

ಅಲ್ಲದೆ, ಸಮಗ್ರ ಯೋಜನಾ ವರದಿ ಅಂದರೆ ಡಿಪಿಆರ್ ಸಿದ್ಧಪಡಿಸಲು ಕೈಗೊಳ್ಳಬೇಕಾದ ಸ್ಥಳ ಪರಿಶೀಲನೆ, ಅಗತ್ಯ ದಾಖಲೆಗಳ ಸಂಗ್ರಹ, ಇಲಾಖಾವಾರು ಜವಾಬ್ದಾರಿಗಳು ಹಾಗೂ ವರದಿ ಸಿದ್ಧಪಡಿಸುವ ಕಾಲಮಿತಿಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

Advertisement

Advertisement

ಶಿಶಿಲ-ಬೈರಾಪುರ ರಸ್ತೆ ಸಂಪರ್ಕವಾದರೆ ಶಿಶಿಲ, ಶಿಬಾಜೆ, ಅರಸಿನಮಕ್ಕಿ, ಹತ್ಯಡ್ಕ, ಕಳೆಂಜ, ರೆಖ್ಯ, ಕೊಕ್ಕಡ, ಬೈರಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ 50 ಸಾವಿರಕ್ಕೂ ಅಧಿಕ ಜನರಿಗೆ ಪ್ರಯೋಜನವಾಗಲಿದೆ. ಚಾರ್ಮಾಡಿ ಹಾಗೂ ಶಿರಾಡಿ ಘಾಟಿಯ ಮೇಲಿನ ಒತ್ತಡವೂ ತಗ್ಗಲಿದೆ. ಈ ಭಾಗದ ಜನರ ಸಂಚಾರ, ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ವ್ಯಾಪಾರ ವಹಿವಾಟಿಗೆ ಅನುಕೂಲವಾಗಲಿದೆ.

ಈ ಹಿಂದೆ ಭಾರತ್ ಮಾಲಾ ಯೋಜನೆಯಡಿ ಸುಮಾರು 65 ಕಿ.ಮೀ. ಉದ್ದದ ರಸ್ತೆ ನಿರ್ಮಾಣದ ಪ್ರಸ್ತಾವನೆ ಇತ್ತು. ಆದರೆ ಈಗ ಜನರು ಒತ್ತಾಯಿಸುತ್ತಿರುವುದು ಬೈರಾಪುರದಿಂದ ಶಿಶಿಲದವರೆಗಿನ ಕೇವಲ 18 ಕಿ.ಮೀ. ಸಂಪರ್ಕ ರಸ್ತೆಯ ಅಭಿವೃದ್ಧಿಯಾಗಿದೆ.

[t4b-ticker]
error: Content is protected !!