ಉಡುಪಿ :ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕದ ಹಿರಿಯ ನಾಯಕ, ಮಾಜಿ ಸಚಿವ ಶ್ರೀ ಪ್ರಮೋದ್ ಮಧ್ವರಾಜ್ ಅವರು ಆಯ್ಕೆಯಾಗಿದ್ದಾರೆ.
Advertisement

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ನಿತಿನ್ ನಬಿನ್ ಅವರು ನ.21 ರಂದು ನವದೆಹಲಿಯಲ್ಲಿ ಒಬಿಸಿ ಮೋರ್ಚದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ್ದು,
Advertisement

Advertisement

ಅದರಲ್ಲಿ ಕರ್ನಾಟಕದಿಂದ ಪ್ರಮೋದ್ ಮಧ್ವರಾಜ್ ಅವರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.
Advertisement

Advertisement

ದೆಹಲಿಯ ಗಜೇಂದ್ರ ಯಾದವ್, ಛತ್ತೀಸ್‌ಗಢದ ಲಲಿತ್ ಚಂದ್ರಕರ್ ಅವರ ಜೊತೆಗೆ ಪ್ರಮೋದ್ ಮಧ್ವರಾಜ್ ಅವರು ಈ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.
Advertisement

Advertisement

ಮಾಜಿ ಸಚಿವರಾಗಿರುವ ಪ್ರಮೋದ್ ಮಧ್ವರಾಜ್ ಅವರು 2022ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಉಡುಪಿ ಶಾಸಕರಾಗಿ, ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.














































