ಮಂಗಳೂರು, ನ.23: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಆದೇಶದ ಪ್ರಕಾರ, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ವ್ಯಾಪಾರಿ ಸಂಸ್ಥೆಗಳು ಪ್ರತಿದಿನ ರಾತ್ರಿ 11:45 ರಿಂದ ಮಾರನೇ ದಿನ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟು ನಡೆಸಿತು. ಈ ನಿರ್ಬಂಧವು ಸಿಎಲ್-4, ಸಿಎಲ್-6(ಎ) ಹಾಗೂ ಸಿಎಲ್-7 ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ಅಂತಹ ಸಂಸ್ಥೆಗಳು ತಮ್ಮ ಪರವಾನಗಿಯಲ್ಲಿ ನಿಗದಿಪಡಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.


ಆಸ್ಪತ್ರೆಗಳು, ಔಷಧ ಅಂಗಡಿಗಳು, ತುರ್ತು ಸೇವೆಗಳು, ಅಗತ್ಯ ಸಾರ್ವಜನಿಕ ಉಪಯೋಗಿತಾ ಸೇವೆಗಳು ಹಾಗೂ ಸರ್ಕಾರ ಅಥವಾ ಸಂಬಂಧಪಟ್ಟ ವಿಶೇಷ ಅನುಮತಿ ಪಡೆದ ಸಂಸ್ಥೆಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.


ನಿರ್ಬಂಧಕ್ಕೆ ಕಾರಣವೇನು?ಮಂಗಳೂರು ನಗರವು ಕರಾವಳಿ ಕರ್ನಾಟಕದ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಹಾಗೂ ಬಂದರು ನಗರವಾಗಿದ್ದು, ವಿವಿಧ ಧರ್ಮ, ಜಾತಿ ಮತ್ತು ಸಮುದಾಯಗಳ ಜನರು ಸಹಬಾಳ್ವೆಯಿಂದ ನೆಲೆಸಿರುವ ಕೋಮು ಸೂಕ್ಷ್ಮ ಪ್ರದೇಶವಾಗಿದೆ.


ನಗರದ ಹಲವು ಕಡೆಗಳಲ್ಲಿ ತಡರಾತ್ರಿಯವರೆಗೂ, ಕೆಲವೆಡೆ ಬೆಳಗಿನ ಜಾವದವರೆಗೂ ವ್ಯಾಪಾರ ವಹಿವಾಟು ನಡೆಯುವ ಭಾಗ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಮಾದಕ ವ್ಯಸನ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದು ಮತ್ತು ಸಾರ್ವಜನಿಕರಿಗೆ ಎದುರಾಗುತ್ತಿದೆ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
ರಾತ್ರಿ ವೇಳೆ ಅನಗತ್ಯವಾಗಿ ಜನರು ಗುಂಪುಗೂಡುವುದು, ಓಡಾಟ ನಡೆಸುವುದು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹರಡುವ ವದಂತಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ವ್ಯಾಪಾರ ಕೇಂದ್ರಗಳು ರಾತ್ರಿ ಪೂರ್ತಿ ತೆರೆದಿರುವುದರಿಂದ ಜನಸಂದಣಿ ಹೆಚ್ಚಾಗಿ ಅಹಿತಕರ ಘಟನೆಗಳಿಗೆ ಕಾರಣವಾಗುವ ಅಪಾಯವೂ ಇದೆ ಆದೇಶದಲ್ಲಿ ನಮೂದಿಸಲಾಗಿದೆ.ಇದಲ್ಲದೆ, ರಾತ್ರಿ ವೇಳೆ ಅಂಗಡಿಗಳು, ಹೋಟೆಲ್‌ಗಳು ಮತ್ತು ಇತರ ವ್ಯಾಪಾರ ಕೇಂದ್ರಗಳ ಸುತ್ತಮುತ್ತ ಮಾದಕ ವ್ಯಸನಿಗಳು, ಸಮಾಜಘಾತಕ ವ್ಯಕ್ತಿಗಳು ಮತ್ತು ವ್ಯಕ್ತಿಗಳು ಅನಗತ್ಯವಾಗಿ ಅನುಮಾನಿಸುವುದು, ಕಾಲಹರಣ ಮಾಡುವುದು ಕಂಡುಬಂದಿದೆ. ಇಂತಹ ಪರಿಸ್ಥಿತಿಗಳು ಅಪರಾಧ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ವ್ಯಾಪಾರ ಕೇಂದ್ರಗಳ ಸುತ್ತ ವಾಹನಗಳ ನಿಲುಗಡೆ, ಜೋರಾದ ಶಬ್ದ. ರಸ್ತೆಗಳಲ್ಲಿ ಅನಗತ್ಯ ಗುಂಪುಗೂಡುವಿಕೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ವಿಶೇಷವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಾಗೂ ವಸತಿ ಪ್ರದೇಶಗಳ ನಿವಾಸಿಗಳ ನೆಮ್ಮದಿ ಮತ್ತು ಶಾಂತಿಗೆ ಭಂಗ ಉಂಟಾಗುತ್ತಿರುವ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾತ್ರಿ 11:45 ರಿಂದ ಬೆಳಗ್ಗೆ 5:30 ರವರೆಗೆ ವ್ಯಾಪಾರ ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಮುಂತಾದವು.














































