
ಬೆಂಗಳೂರು: ಆಶಾ ಕಾರ್ಯಕರ್ತೆಯರು 10 ದಿನಗಳಿಂದ ಕೆಲಸಕ್ಕೆ ಹೋಗದೆ ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯದ ಆರೋಗ್ಯ ಸೇವೆಗಳು ಯಾವುದೇ ಅಡ್ಡಿಯಿಲ್ಲದೆ ನಡೆಯುತ್ತಿವೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ನ.26ರಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆಶಾ ಕಾರ್ಯಕರ್ತರಿಲ್ಲದಿದ್ದರೂ ಆರೋಗ್ಯ ಸೇವೆ ನಡೆಯುತ್ತೆ” ಎಂದು ಸ್ಪಷ್ಟಪಡಿಸಿದರು.
Advertisement

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಆಶಾ ಕಾರ್ಯಕರ್ತೆಯರು ಕೆಲಸ ಬಹಿಷ್ಕರಣ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಚಿವರ ಈ ಹೇಳಿಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
Advertisement

Advertisement












































