ಯು.ಟಿ. ಖಾದರ್ ಹೇಳಿಕೆಗೆ ಆಶಾ ಕಾರ್ಯಕರ್ತೆಯರ ಆಕ್ರೋಶ: ₹15 ಸಾವಿರ ಸಂಬಳ ನಮ್ಮ ಹಕ್ಕು

Picture of Savistara

Savistara

Bureau Report

ಬೆಂಗಳೂರು: ಆಶಾ ಕಾರ್ಯಕರ್ತೆಯರ ₹15 ಸಾವಿರ ಸಂಬಳ ಬೇಡಿಕೆ ಕುರಿತು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ನೀಡಿದ ಹೇಳಿಕೆಗೆ ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Advertisement

‘ಆಶಾಗಳು ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತೆ!’ ಎಂಬ ಹೇಳಿಕೆ ಆಶಾ ಕಾರ್ಯಕರ್ತೆಯರ ಸೇವೆಯನ್ನು ಕಡೆಗಣಿಸುವಂತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಮೈಸೂರು-ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನಕುಮಾರ್ ಖಂಡಿಸಿದ್ದಾರೆ. ಇದು ಬೇಜವಾಬ್ದಾರಿ ಹೇಳಿಕೆ ಎಂದು ಅವರು ಆರೋಪಿಸಿದ್ದಾರೆ.

Advertisement

Advertisement

ಗ್ರಾಮೀಣ ಮಟ್ಟದಲ್ಲಿ ಆರೋಗ್ಯ ಸೇವೆಯ ಬೆನ್ನೆಲುಬಾಗಿರುವ ಆಶಾ ಕಾರ್ಯಕರ್ತೆಯರು ಇಲ್ಲದಿದ್ದರೆ ಲಸಿಕೆ ಕಾರ್ಯಕ್ರಮ, ಗರ್ಭಿಣಿಯರ ಆರೈಕೆ, ಮನೆ ಭೇಟಿ, ಸರ್ಕಾರಿ ಆಸ್ಪತ್ರೆಗೆ ರೋಗಿಗಳನ್ನು ಕರೆತರುವುದು ಸೇರಿದಂತೆ ಯಾವುದೇ ಸೇವೆ ಸರಿಯಾಗಿ ನಡೆಯುವುದಿಲ್ಲ. ಅವರ ಸೇವೆಯನ್ನು ಕಡಿಮೆ ಮಾಡಿ ಮಾತನಾಡುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Advertisement

₹15 ಸಾವಿರ ಸಂಬಳ ನೀಡಬೇಕಾ ಎಂದು ಪ್ರಶ್ನಿಸುವ ಬದಲು ಅವರ ಬೇಡಿಕೆಗೆ ಸ್ಪಂದಿಸಬೇಕಿತ್ತು. ಸಂಬಳ ನೀಡುವುದು ಭಿಕ್ಷೆಯಲ್ಲ, ನಮ್ಮ ಹಕ್ಕು ಎಂದು ಆಶಾ ಕಾರ್ಯಕರ್ತೆಯರು ಘೋಷಣೆ ಕೂಗಿದ್ದಾರೆ.

Advertisement

Advertisement

ಯು.ಟಿ. ಖಾದರ್ ತಕ್ಷಣ ತಮ್ಮ ಹೇಳಿಕೆ ಹಿಂಪಡೆದು ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಸ್ಪಂದಿಸಬೇಕೆಂದು ಒತ್ತಾಯಿಸಲಾಗಿದೆ. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಉಗ್ರ ಸ್ವರೂಪ ಪಡೆಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

[t4b-ticker]
error: Content is protected !!