ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ: RSS ಪ್ರಚಾರಕ ಸು. ರಾಮಣ್ಣರಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

Picture of Savistara

Savistara

Bureau Report

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ವಿಶೇಷ ಉಪನ್ಯಾಸದಲ್ಲಿ RSS ಜೇಷ್ಠ ಪ್ರಚಾರಕರಾದ ಪೂಜ್ಯ ಶ್ರೀ ಸು. ರಾಮಣ್ಣ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

Advertisement

1963ರಲ್ಲಿ ಮೈಸೂರು NIE ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದು, ವೃತ್ತಿ ಸುಖವನ್ನು ತ್ಯಜಿಸಿ ದೇಶಸೇವೆಗೆ ತಮ್ಮನ್ನು ಮುಡಿಪಾಗಿಟ್ಟ ಅವರ ಜೀವನವೇ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಯಿತು.

Advertisement

Advertisement

ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರು, ಬಾಬಾ ಸಾಹೇಬ್ ಅಂಬೇಡ್ಕರ್, ವೀರ ಸಾವರ್ಕರ್, ಡಾ. ಅಬ್ದುಲ್ ಕಲಾಂ ಅವರ ಜೀವನ ಮೌಲ್ಯಗಳ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರವನ್ನು ಅವರು ವಿವರಿಸಿದರು.

Advertisement

“ಓದುವುದು ಉದ್ಯೋಗಕ್ಕಾಗಿ ಮಾತ್ರ ಅಲ್ಲ, ಬದುಕುವುದು ನಮಗಾಗಿ ಮಾತ್ರ ಅಲ್ಲ” ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ವರ್ಗ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
[t4b-ticker]
error: Content is protected !!