ಐವರ್ನಾಡು – ನನ್ಯಡ್ಕ ಎಸ್.ಸಿ ಕಾಲೋನಿ ರಸ್ತೆ ಕಾಂಕ್ರೀಟೀಕರಣಕ್ಕೆ ಅನುದಾನ ಮಂಜೂರಾತಿಗೆ ಮನವಿ: ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಬಿಜೆಪಿ ಶಕ್ತಿ ಕೇಂದ್ರದಿಂದ ಒತ್ತಾಯ | ಸರ್ವೆ ಕಾರ್ಯ ಪೂರ್ಣ, ಶೀಘ್ರ ಅನುದಾನ ಬಿಡುಗಡೆಗೊಳಿಸುವಂತೆ ಕೋರಿಕೆ

Picture of Savistara

Savistara

Bureau Report

ಸುಳ್ಯ:ಐವರ್ನಾಡು – ನನ್ಯಡ್ಕ ಎಸ್.ಸಿ. (ಪರಿಶಿಷ್ಟ ಜಾತಿ) ಕಾಲೋನಿ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಗೆ ಸಮಾಜ ಕಲ್ಯಾಣ ಇಲಾಖೆಯಡಿ ಅನುದಾನ ಮಂಜೂರು ಮಾಡುವಂತೆ ಆಗ್ರಹಿಸಿ ಐವರ್ನಾಡು

Advertisement

ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ನಂದಕುಮಾರ್ ಅವರ ನೇತೃತ್ವದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಮನವಿ ಸಲ್ಲಿಸಲಾಯಿತು.

Advertisement

Advertisement

ರಸ್ತೆಯ ಅಭಿವೃದ್ಧಿ ಹಾಗೂ ಕಾಂಕ್ರೀಟೀಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸಲ್ಲಿಸಲಾಗಿದ್ದ ಮನವಿಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಕಾರ್ಯ ನಡೆಸಿದ್ದಾರೆ.

Advertisement

Advertisement

ಇದೀಗ ಮುಂದಿನ ಹಂತವಾಗಿ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಲು ಅನುಕೂಲವಾಗುವಂತೆ ಶಾಸಕರು ವಿಶೇಷ ಮುತುವರ್ಜಿ ವಹಿಸಿ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಅಗತ್ಯ ಅನುದಾನವನ್ನು ಮಂಜೂರು ಮಾಡಿಸಿಕೊಡಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.

Advertisement

Advertisement

ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಕ್ಯಾಂಪ್ಕೊ ನಿಕಟಪೂರ್ವ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ, ಮೋಹನ್ ಬೋಳುಗುಡ್ಡೆ, ಗಣೇಶ್ ಭಜಂತಡ್ಕ ಮಡ್ತಿಲ, ಗಣೇಶ್ ಕೊಚ್ಚಿ, ನಿಖಿಲ್ ಮಾಡ್ತಿಲ, ಮುರಳೀಧರ ಕೊಚ್ಚಿ ಹಾಗೂ ಕಿಶನ್ ಜಬಳೆ ಉಪಸ್ಥಿತರಿದ್ದರು.

News Updates

ಐವರ್ನಾಡು – ನನ್ಯಡ್ಕ ಎಸ್.ಸಿ ಕಾಲೋನಿ ರಸ್ತೆ ಕಾಂಕ್ರೀಟೀಕರಣಕ್ಕೆ ಅನುದಾನ ಮಂಜೂರಾತಿಗೆ ಮನವಿ: ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಬಿಜೆಪಿ ಶಕ್ತಿ ಕೇಂದ್ರದಿಂದ ಒತ್ತಾಯ | ಸರ್ವೆ ಕಾರ್ಯ ಪೂರ್ಣ, ಶೀಘ್ರ ಅನುದಾನ ಬಿಡುಗಡೆಗೊಳಿಸುವಂತೆ ಕೋರಿಕೆ

[t4b-ticker]
error: Content is protected !!