ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ₹2,000 ಪ್ರೋತ್ಸಾಹಧನ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದೆ.
Advertisement

ಇದರಿಂದ ಒಟ್ಟು ಗೌರವಧನ ₹10,000ಕ್ಕೆ ಏರಿಕೆಯಾಗಲಿದೆ.
Advertisement

Advertisement

ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಶನಿವಾರ ತಮ್ಮ ನಿವಾಸದಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿನಿಧಿ ಮಂಡಳಿ ಜೊತೆ ಮಾತುಕತೆ ನಡೆಸಿದರು.
Advertisement

Advertisement

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ₹2,000 ಹೆಚ್ಚಳಕ್ಕೆ ಒಪ್ಪಿದ್ದು, ಪ್ರತಿನಿಧಿಗಳು ಸಹ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವರು ತಿಳಿಸಿದರು. ಇನ್ನೂ ₹1,000 ಪ್ರೋತ್ಸಾಹಧನದ ಬೇಡಿಕೆ ಬಾಕಿ ಇದ್ದು, ಅದರ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಯಲಿದೆ.
Advertisement

Advertisement

ಹಿಂದಿನ ಬಜೆಟ್‌ನಲ್ಲಿ ಅಂಗನವಾಡಿ ಸೇರಿ ಇತರ ಇಲಾಖೆಗಳಿಗೆ ₹1,000 ಪ್ರೋತ್ಸಾಹ ನೀಡಲಾಗಿತ್ತು, ಆದರೆ ಆಶಾ ಕಾರ್ಯಕರ್ತೆಯರಿಗೆ ನೀಡಿರಲಿಲ್ಲ ಎಂದು ಪ್ರತಿನಿಧಿಗಳು ಒತ್ತಾಯಿಸಿದ್ದಾರೆ 12 ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಅಹರ್ನಿಶಿ ಪ್ರತಿಭಟನೆ ಶನಿವಾರ ಸಂಜೆಯೊಳಗೆ ಅಂತ್ಯಗೊಳ್ಳುವ ನಿರೀಕ್ಷೆ ಇದೆ ಎಂದು ಸಚಿವ ಖಾದರ್ ಹೇಳಿದ್ದಾರೆ.








































